ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿಗೆ ಪ್ರತಿಭಟನೆಯ ಕಾವು ತಟ್ಟಿದೆ. ಒಳಮೀಸಲಾತಿ ಆಗ್ರಹಿಸಿ ಸಿಎಂ ಮುಂದೆಯೇ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿದ್ದಾರೆ.
ವಿಧಾನಸೌಧದಲ್ಲಿ ಡಾ. ಅಂಬೇಡ್ಕರ್ ಪ್ರತಿಮೆ ಬಳಿ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿದ್ದಾರೆ.ವಿಧಾನಸೌಧದ ಎದುರುಗಡೆ ಪೂರ್ವ ದಿಕ್ಕಿನ ಕಡೆಗೆ ಇರುವ ಅಂಬೇಡ್ಕರ್ ಪ್ರತಿಮೆ ಮುಂದೆ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿದೆ. ಅಂಬೇಡ್ಕರ್ ಪರಿನಿರ್ವಾಣದ ಕಾರ್ಯಕ್ರಮದಲ್ಲಿ ಒಳಮೀಸಲಾತಿ ನೀಡುವಂತೆ ಸಿಎಂ ಮುಂದೆ ಜಂಬೂದ್ವೀಪ ಜನಸೇವೆ ಸಂಘಟನೆಯವರು ಪ್ರತಿಭಟನೆ ಮಾಡಿದ್ದಾರೆ. ಪಿಟಿಸಿಎಲ್ ಕಾಯ್ದೆ ತಿದ್ದುಪಡಿ ಮಾಡುವಂತೆ ಹಾಗೂ ಎಜಿ ಸದಾಶಿವ ವರದಿ ಅನ್ವಯ ಮಾದಿಗ ಸಮಾಜಕ್ಕೆ ಪ್ರತ್ಯೇಕ ಮೀಸಲಾತಿ ನೀಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.