ಬೆಳಗಾವಿ: ಮುಸ್ಲಿಂ ಯುವಕನ ಕಿರುಕುಳಕ್ಕೆ ಬೇಸತ್ತು ದಲಿತ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲ್ಲೂಕಿನ ಚಿಕ್ಕಮಲ್ಲೂರು ಗ್ರಾಮದ ಶಿಲ್ಪಾ(22) ಎಂಬುವರೇ ಆತ್ಮಹತ್ಯೆಗೆ ಶರಣಾದಂತ ವಿದ್ಯಾರ್ಥಿನಿಯಾಗಿದ್ದಾರೆ. ಈಕೆ ಬೆಳಗಾವಿಯಲ್ಲಿ ಬಿಸಿಎ ಓದುತ್ತಿದ್ದರು.
ಶಿಗ್ಗಾಂವಿಯ ಫರ್ನಿಚರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಂತ ನವೀನ್ ಎಂಬಾತನನ್ನು ಕಳೆದ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದರು. ಈ ವಿಷಯ ಅಂಗಡಿಯ ಮಾಲೀಕನಿಗೆ ಗೊತ್ತಾಗಿ ಟಾರ್ಚರ್ ಕೊಡೋದಕ್ಕೆ ಶುರು ಮಾಡಿದ್ದರು.
ಶಿಗ್ಗಾಂವಿಯ ಫರ್ನಿಚರ್ ಅಂಗಡಿಯ ಮಾಲೀಕ ರಂಜಾನ್ ನದಾಫ್ ಎಂಬಾತ ಶಿಲ್ಪಾಗೆ ಕರೆ ಮಾಡಿ ಕಿರುಕುಳ ನೀಡುತ್ತಿದ್ದನಂತೆ. ಈ ಕಾರಣದಿಂದ ಮನನೊಂದು ಯುವತಿ ಶಿಲ್ಪಾ ಬೆಳಗಾವಿಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಅಂದಹಾಗೇ ಕಳೆದ ವಾರ ನಡೆದಂತ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನವೀನ್ ಕೆಲಸ ಮಾಡ್ತಿದ್ದಂತ ಅಂಗಡಿ ಮಾಲೀಕನ ಟಾರ್ಚರ್ ಗೆ ಶಿಲ್ಪಾ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
SHOCKIN: ಪತ್ನಿಯ ಜೊತೆ ಅಕ್ರಮ ಸಂಬಂಧ ಹೊಂದಿದ್ದವನ ಜನನಾಂಗ ಕತ್ತರಿಸಿ ಠಾಣೆಗೆ ತಂದ ಪತಿ
Online Scam: ನಕಲಿ ವೆಬ್ಸೈಟ್ ಲಿಂಕ್ ಗಳ ಬಗ್ಗೆ ಜಾಗರೂಕರಾಗಿರಲು ಪ್ರವಾಸಿಗರಿಗೆ ಕೇಂದ್ರ ಸರ್ಕಾರ ಸೂಚನೆ