ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆ ಮುಂದೆ ಜಮಾಯಿಸಿದ ನಟ ದರ್ಶನ್ ಅಭಿಮಾನಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ.

ಕಳೆದ ಆರು ದಿನಗಳಿಂದ ದರ್ಶನ್ ಮತ್ತು ಗ್ಯಾಂಗ್ ಪೊಲೀಸ್ ಕಸ್ಟಡಿಯಲ್ಲಿದ್ದರು. ಇದೀಗ ಇಂದು ಸಂಜೆ ಮತ್ತೆ ಪೊಲೀಸರು ದರ್ಶನ್ ಮತ್ತು ಅವರ ಸಹಚರರನ್ನು ಕೋರ್ಟಿಗೆ ಹಾಜರುಪಡಿಸುವ ಹಿನ್ನೆಲೆಯಲ್ಲಿ ಅದಕ್ಕೂ ಮುಂಚೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗೆ ಎಂದು ಕರೆದುಕೊಂಡು ಹೋಗಲಿದ್ದಾರೆ. ಈ ವೇಳೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ಠಾಣೆಯ ಮುಂದೆ ದರ್ಶನ್ ಅಭಿಮಾನಿಗಳು ಜಮಾಯಿಸಿದ್ದು ಅವರ ಮೇಲೆ ಪೊಲೀಸರು ಲಾಠಿ ಬೀಸಿ ಚದುರಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು ಇಂದು ಕೋರ್ಟಿಗೆ ಹಾಜರುಪಡಿಸುವ ಹಿನ್ನೆಲೆಯಲ್ಲಿ ಇನ್ನಷ್ಟು ಹೆಚ್ಚಿನ ತನಿಖೆಗಾಗಿ ಪೊಲೀಸರು ದರ್ಶನ ಸೇರಿದಂತೆ ಎಲ್ಲಾ ಆರೋಪಿಗಳನ್ನು ಮತ್ತಷ್ಟು ದಿನ ಪೊಲೀಸ್ ಕಸ್ಟಡಿಗೆ ನೀಡಿ ಎಂದು ಮನವಿ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹಾಗಾಗಿ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಿಗೆ ಇನ್ನು ಕೆಲವು ದಿನಗಳ ಕಾಲ ಜೈಲೇ ಗತಿಯಾಗಿದೆ.

Share.
Exit mobile version