ಬೆಂಗಳೂರು: ರೇಣುಕಾಸ್ವಾಮಿಯ ಮೂಗು, ಬಾಯಿ, ದವಡೆ ಕತ್ತರಿಸಿ ವಿಕೃತಿ ಮರೆದಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ಈಗಾಗಲೇ ಪೋಲಿಸರು ನಟ ದರ್ಶನ್ ಸೇರಿದಂತೆ ಹತ್ತು ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದು, ಸದ್ಯ ವಿಚಾರಣೆಯನ್ನು ನಡೆಸುತ್ತಿದ್ದಾರೆ.
ಪ್ರಕರಣದಲ್ಲಿ ಎಲ್ಲಾ ರೀತಿಯನ್ನು ಅವಲೋಕನ ಮಾಡುತ್ತಿದ್ದು, ಸದ್ಯ ಕೊಲೆಯಾದ ರೇಣುಕಸ್ವಾಮಿಯ ಮೃತ ದೇಹವನ್ನು ಅವರ ಕುಟುಂಬಕ್ಕೆ ಹಸ್ತಾರ ಮಾಡುವ ಪ್ರಕ್ರಿಯೆ ಈಗಾಗಲೇ ನಡೆದಿದೆ ಎನ್ನಲಾಗಿದೆ. ಆರ್ ಆರ್ ನಗರದ ವಿನಯ್ ಶೆಡ್ನಲ್ಲಿ ರೇಣುಕಾ ಸ್ವಾಮಿ ಕೊಲೆ ಮಾಡಿದ್ದಾರೆ. ಕೊಲೆ ನಂತರ ಆಟೋ ಹಾಗೂ ಸ್ಕಾರ್ಪಿಯೋ ಕಾರಿನಲ್ಲಿ ಮೃತದೇಹವನ್ನು ಸಾಗಿಸಿ ಕಾಲುವೆಗೆ ಎಸೆದಿದ್ದಾರೆ. ಸದ್ಯ ಹಲ್ಲೆ ನಡೆಸುವ ಸಂದರ್ಭದಲ್ಲಿ ದರ್ಶನ್ ಮತ್ತು ಪವಿತ್ರಾ ಗೌಡ ಸ್ಥಳದಲ್ಲಿ ಇದ್ದರು. ದರ್ಶನ್ ಹೊಡೆದ ಬಳಿಕ ರೇಣುಕಾಸ್ವಾಮಿ ಸಾವನ್ನಪ್ಪಿದ್ದಾನೆ ಎಂದು ಉಳಿದ ಆರೋಪಿಗಳು ತಪ್ಪೊಪ್ಪಿಗೆ ನೀಡಲಾಗಿದೆ ಎನ್ನಲಾಗಿದೆ.