ಬೆಂಗಳೂರು: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ನಟಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ ಆರೋಪದ ಮೇಲೆ ರೇಣುಕಾ ಸ್ವಾಮಿ ಎಂಬ ವ್ಯಕ್ತಿಯನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟನನ್ನು ಬಂಧಿಸಲಾಗಿದೆ. ಈವರೆಗೆ 10 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ.
ಇದೀಗ ಈ ಒಂದು ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ರೇಣುಕಾಸ್ವಾಮಿ ಮೇಲೆ ಬೆಲ್ಟ್ ನಿಂದ ದರ್ಶನ್ ಹಲ್ಲೆ ಮಾಡಿದ್ದಾರೆ ಎಂಬ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ನನ್ನ ಗೆಳತಿಗೆ ಕೆಟ್ಟದಾಗಿ ಮೆಸೇಜ್ ಮಾಡ್ತೀಯಾ ಅಂದ್ರು ಪಟ್ಟಿ ಮಾದರಿಯ ವಸ್ತುವಿನಿಂದ ಹಲ್ಲೆ ನಡೆಸಿದ್ದರು. ಎಂದು ವಿಚಾರಣೆಯ ವೇಳೆ ಮಾಹಿತಿ ಸಿಕ್ಕಿದೆ. ಹತ್ಯೆಯ ಬಳಿಕ ದರ್ಶನಗೆ ಆಪ್ತರು ಮಾಹಿತಿ ನೀಡಿದ್ದು, ರೇಣುಕಾಸ್ವಾಮಿಯನ್ನ ಗೋಡೆಗೆ ಎತ್ತಿ ಎತ್ತಿ ಬಿಸಾಕಿದ್ದಾರಂತೆ ಎಂದು ತನಿಖೆಯ ವೇಳೆ ಬಹಿರಂವಾಗಿದೆ.
ಮೃತರನ್ನು ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಬೆಂಗಳೂರು ನಗರ ಆಯುಕ್ತ ಬಿ.ದಯಾನಂದ, “ಜೂನ್ 9 ರಂದು ಶವ ಪತ್ತೆಯಾಗಿದೆ. ಈ ಪ್ರಕರಣದಲ್ಲಿ ಹತ್ತಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ಒಬ್ಬ ನಟನನ್ನು ವಶಕ್ಕೆ ತೆಗೆದುಕೊಳ್ಳಲಾಗುತ್ತದೆ. ತನಿಖೆಯ ನಂತರ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.