ಬೆಂಗಳೂರು: ಕೊಲೆ ಆರೋಪದ ಮೇರೆಗೆ ಪೊಲೀಸ್ ಕಸ್ಟಡಿಯಲ್ಲಿರುವ ನಟ ದರ್ಶನ್ ನನ್ನು ಸ್ಯಾಂಡಲ್‌ವುಡ್‌ನಿಂದ ಬ್ಯಾನ್ ಮಾಡುವುದಕ್ಕೆ ಒತ್ತಡ ಕೇಳಿ ಬಂದಿದೆ.
ಈ ನಡುವೆ ಇಂದು ದರ್ಶನ್ ಸಿನಿಮಾ ರಂಗದಲ್ಲಿ ಸಂಪೂರ್ಣವಾಗಿ ಬ್ಯಾನ್ ಮಾಡುವುದರ ಬಗ್ಗೆ ಇಂದು ವಾಣಿಜ್ಯ ಮಂಡಳಿ ಸಭೆ ನಡೆಸಲಿದೆ. ಸಭೆಯಲ್ಲಿ ಈ ಬಗ್ಗೆ ಅಧಿಕೃತ ತೀರ್ಮಾನವನ್ನು ತೆಗೆದುಕೊಳ್ಳುವುದರ ಬಗ್ಗೆ ಚರ್ಚೆ ನಡೆಯಲಿದೆ ಎನ್ನಲಾಗಿದೆ. ಸಭೆ ಬಳಿಕ ಈ ಬಗ್ಗೆ ಇಂದು ಸಂಜೆ ಅಧಿಕೃತ ಮಾಹಿತಿ ಹೊರ ಬೀಳಲಿದೆ.