ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ರೈಲಿನಲ್ಲಿ ಕೊಲೆ ಆರೋಪಿ ದರ್ಶನ್ಗೆ ರಾಜಾತಿಥ್ಯ ನೀಡಿದ ವಿಚಾರವಾಗಿ ಇದೀಗ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ಸಿದ್ಧತೆ ಮಾಡಿಕೊಂಡಿದ್ದಾರೆ.
ಹೌದು ಆರೋಪಿಗಳಾದ ವಿಲ್ಸನ್ ಗಾರ್ಡನ್ ನಾಗ ಹಾಗೂ ವೇಲು ನನ್ನು ವಶಕ್ಕೆ ಪೊಲೀಸರು ವಶಕ್ಕೆ ಪಡೆಯಲಿದ್ದಾರೆ. ರಾಜ್ಯಾತೀಥ್ಯ ಸಂಬಂಧ ಒಟ್ಟು ಮೂರು ಕೇಸ್ ದಾಖಲಿಸಲಾಗಿತ್ತು. 2 ಕೇಸ್ ನಲ್ಲಿ ವಿಲ್ಸನ್ ಗಾರ್ಡನ್ ನಾಗ ಆರೋಪಿಯಾಗಿದ್ದಾನೆ. ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ಇದೀಗ ತೀರ್ಮಾನಿಸಿದ್ದಾರೆ.
ಬಳಿಕ ಮಧ್ಯಾಹ್ನ 3:30ಕ್ಕೆ ಜಡ್ಜ್ ಮುಂದೆ ಇಬ್ಬರನ್ನು ಹಾಜರುಪಡಿಸಲಿದ್ದಾರೆ.ನ್ಯಾಯಾಲಯಕ್ಕೆ ಹಾಜರುಪಡಿಸಿ ವಶಕ್ಕೆ ಪಡೆಯಲು ತೀರ್ಮಾನಿಸಲಾಗಿದೆ. ಬೆಂಗಳೂರಿನ 8ನೇ ACMM ನ್ಯಾಯಾಲಯಕ್ಕೆ ಪೊಲೀಸರು ಇಬ್ಬರು ಆರೋಪಿಗಳನ್ನು ಹಾಜರುಪಡಿಸಲಿದ್ದಾರೆ. ವಿಚಾರಣೆ ನಡೆಸಿದ ಬಳಿಕ ಕೋರ್ಟ್ ಆದೇಶದ ಮೇರೆಗೆ ವಶಕ್ಕೆ ಪಡೆದುಕೊಳ್ಳಲಿದ್ದಾರೆ.