ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಅರೆಸ್ಟ್‌ ಆಗಿರುವ ನಟ ದರ್ಶನ್‌ ಗೆ ಪುತ್ರ ವಿನೀಶ್‌ ಫಾದರ್ಸ್‌ ಡೇ ಗೆ ವಿಶ್‌ ಮಾಡಿದ್ದು, ‘ಅಪ್ಪ ನಿಮ್ಮನ್ನು ಮಿಸ್ ಮಾಡಿಕೊಳ್ತಿದ್ದೀನಿ, ನೀವೇ ನನ್ನ ಹೀರೊʼ ಎಂದು ಶುಭಾಶಯ ಕೋರಿದ್ದಾರೆ.

ಈ ಕುರಿತು ಸಾಮಾಜಿಕ ಜಾಲಾತಾಣದಲ್ಲಿ ಪೋಸ್ಟ್‌ ಮಾಡಿರುವ ವಿನೀಶ್‌, ಹ್ಯಾಪಿ ಫಾದರ್ಸ್ ಡೇ ಅಪ್ಪ. ನಾನು ನಿಮ್ಮನ್ನು ಬಹಳ ಮಿಸ್ ಮಾಡಿಕೊಳ್ತಿದ್ದೀನಿ. ಐ ಲವ್ ಯು. ಯಾವಾಗಲೂ ನೀವೇ ನನ್ನ ಹೀರೊ’ ಎಂದು ವಿನೀಶ್ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಬರೆದುಕೊಂಡಿದ್ದಾನೆ.

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ ಅರೆಸ್ಟ್‌ ಆಗಿದ್ದು, ಸದ್ಯ ವಿಚಾರಣೆ ಎದುರಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ತಂದೆ ಕುರಿತಾಗಿ ಪೋಸ್ಟ್​​ ಮಾಡಿದ್ದ ದರ್ಶನ್​ ಪುತ್ರ ವಿನೀಶ್​​ ಇದೀಗ ಮತ್ತೆ ಫಾದರ್ಸ್‌ ಡೇಗೆ ಭಾವುಕ ಪೋಸ್ಟ್‌ ಮಾಡಿದ್ದಾನೆ.

Share.
Exit mobile version