ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅರೆಸ್ಟ್ ಆಗಿದ್ದಾರೆ. ಈ ನಡುವೆ ಪತ್ನಿ ವಿಜಯಲಕ್ಷ್ಮಿ ವಿರುದ್ಧವೂ ಪ್ರಕರಣವೊಂದು ದಾಖಲಾಗಿದ್ದು, ಪ್ರಕರಣದಲ್ಲಿ ಅವರು ಎ1 ಆರೋಪಿಯಾಗಿದ್ದಾರೆ.
ಹೌದು, ದರ್ಶನ್ ಅವರ ಮೈಸೂರಿನ ಫಾರಂ ಹೌಸ್ ನಲ್ಲಿ ಅಕ್ರಮವಾಗಿ ಬಾರ್ ಹೆಡೆಡ್ ಗೂಸ್ ಪಕ್ಷಿಗಳನ್ನು ಸಾಕಿಕೊಂಡಿದ್ದರು. ಈ ಪಕ್ಷಿಯನ್ನು ಸಾಕುವುದು ಕಾನೂನು ಪ್ರಕಾರ ಅಪರಾಧ. ಈ ಹಿನ್ನೆಲೆಯಲ್ಲಿ ಪಕ್ಷಿಗಳನ್ನು ವಶಡಿಸಿಕೊಂಡಿದ್ದ ಅರಣ್ಯ ಇಲಾಖೆ , ದರ್ಶನ್ ವಿರುದ್ಧ ಪ್ರಕರಣ ದಾಖಲಿಸಿತ್ತು.
ನಿಯಮ ಬಾಹಿರವಾಗಿ ಪಕ್ಷಿಗಳನ್ನು ಸಾಕಿದ್ದ ಕಾರಣ, ಮೈಸೂರು ಫಾರಂ ಹೌಸ್ ನ ಮಾಲೀಕರಾಗಿರುವ ವಿಜಯಲಕ್ಷ್ಮಿ ದರ್ಶನ್, ಮ್ಯಾನೇಜರ್ ನಾಗರಾಜು ಹಾಗೂ ದರ್ಶನ್ ವಿರುದ್ಧ ಪ್ರಕರಣ ದಾಖಲಿಸಿ ವಿಚಾರಣೆಗೆ ಕರೆಯಲಾಗಿತ್ತು. ಈ ಪ್ರಕರಣದಲ್ಲಿ ವಿಜಯಲಕ್ಷ್ಮಿ ಎ1, ನಾಗರಾಜು ಎ2 ಹಾಗೂ ದರ್ಶನ್ ಎ3 ಆಗಿದ್ದರು. ಆದರೆ ಯಾರೂ ಸಹ ವಿಚಾರಣೆಗೆ ಬಂದಿರಲಿಲ್ಲ. ಇದೀಗ ಅರಣ್ಯ ಇಲಾಖೆ ಸಿಬ್ಬಂದಿ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲು ಸಿದ್ಧತೆ ನಡೆಸಿದೆ.