ಬೆಂಗಳೂರು: ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದಾರೆ. ಅವರ ಬಂಧನದ ನಂತ್ರ ಪತ್ನಿ ವಿಜಯಲಕ್ಷ್ಮೀ ಡಿ ಬಾಸ್ ಅಭಿಮಾನಿಗಳಿಗಾಗಿ ಭಾವನಾತ್ಮಕ ಪೋಸ್ಟ್ ಒಂದನ್ನು ಇನ್ ಸ್ಟಾಗ್ರಾಂನಲ್ಲಿ ಹಾಕಿದ್ದಾರೆ. ಸೋ ನಟ ದರ್ಶನ್ ಅಭಿಮಾನಿಗಳಿಗಾಗಿ ಏನು ವಿಶೇಷ ವಿನಂತಿ ಮಾಡಿದ್ದಾರೆ ಅಂತ ಪೋಸ್ಟ್ ಮುಂದಿದೆ ಓದಿ.
ನನ್ನ ಪ್ರೀತಿಯ ಸಹೋದರರೇ,
ದರ್ಶನ್ ಅವರಿಗೆ ನೀವು, ತಮ್ಮ ಅಭಿಮಾನಿಗಳು ಎಂದರೆ ಅಪಾರವಾದ ಪ್ರೀತಿ. ನೀವು ಅವರನ್ನು ಪ್ರೀತಿಸುವಷ್ಟೇ ಅವರು ತಮ್ಮ “ಸೆಲೆಬ್ರಿಟಿಗಳನ್ನು” ತನ್ನ ಹೃದಯದಲ್ಲೇ ಹೊತ್ತಿರುವುದು ನಿಮಗೇ ಗೊತ್ತಿದೆ.
ಇದೊಂದು ಪರೀಕ್ಷೆಯ ಸಮಯ. ನನಗೆ,ನಿಮಗೆ, ನಮ್ಮೆಲ್ಲರಿಗೆ. ನಾವು ತಾಳ್ಮೆ ಕಳೆದುಕೊಂಡು ಮಾತನಾಡುವುದರಿಂದ ಹಾನಿಯಾಗುವುದು ನಮಗೆ. ಆದ್ದರಿಂದ ತಾಳ್ಮೆ, ಶಾಂತಿಯಿಂದಿರೋಣ. ನಿಮ್ಮ ಆತಂಕವನ್ನು ನಾನು, ದರ್ಶನರಿಗೆ ತಲುಪಿಸಿದ್ದೇನೆ. ಅವರೂ ನಿಮ್ಮ ಪ್ರತಿ ಕಾಳಜಿ ವ್ಯಕ್ತಪಡಿಸಿದ್ದಾರೆ.
ನಾವು ನಮ್ಮ ನ್ಯಾಯಾಲಯಗಳ ಮೇಲೆ ವಿಶ್ವಾಸವಿಡೋಣ. ನಮಗೆ ನ್ಯಾಯ ಸಿಗುವ ಸಂಪೂರ್ಣ ಭರವಸೆ ನನಗಿದೆ. ಇಂತಹ ಕಷ್ಟದ ಸಮದಲ್ಲಿ, ದರ್ಶನರ ಅನುಪಸ್ಥಿತಿಯನ್ನು ದುರುಪಯೋಗ ಪಡೆಸಿಕೊಂಡು ಅವರಿಗೆ ಕೇಡು ಬಯಸುವ/ಮಾಡುವವರನ್ನು ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ. ಒಳ್ಳೆಯ ಸಮಯ ಮತ್ತೆ ಮರಳಿ ಬರಲಿದೆ.
ಸತ್ಯಮೇವ ಜಯತೆ! ಅಂತ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿ, ಅಭಿಮಾನಿಗಳಲ್ಲಿ ವಿನಂತಿಸಿದ್ದಾರೆ.
ವಿದ್ಯಾರ್ಥಿಗಳೇ ಗಮನಿಸಿ: ಜುಲೈ.13, 14ರಂದು ನಿಗದಿ ಪಡಿಸಿದ್ದ ‘PG CET-2024ರ ಪರೀಕ್ಷೆ’ ಮುಂದೂಡಿಕೆ
ಜಮ್ಮು-ಕಾಶ್ಮೀರದ ದೋಡಾದಲ್ಲಿ ಭದ್ರತಾ ಪಡೆಗಳಿಂದ ಎನ್ಕೌಂಟರ್: ಮೂವರು ಉಗ್ರರ ಹತ್ಯೆ