ಬೆಂಗಳೂರು:ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆದ ಘಟನೆಗೆ ಸಂಬಂಧಿಸಿದಂತೆ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿದ್ದಾರೆ. ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎಂದು ಹೇಳಲಾಗಿದೆ.
ಇನ್ಸ್ಟಾಗ್ರಾಮ್ನಲ್ಲಿ ದರ್ಶನ್ ಸೇರಿ ಎಲ್ಲರನ್ನೂ ಪತ್ನಿ ವಿಜಯಲಕ್ಷ್ಮಿ ಅನ್ಫಾಲೋ ಮಾಡಿದ್ದಾರೆ. ಈ ಮೊದಲು ಅವರು ದರ್ಶನ್ನ ಫಾಲೋ ಮಾಡುತ್ತಿದ್ದ ವಿಜಯಲಕ್ಷ್ಮಿ ಬೇಸರದಿಂದ ಅವರನ್ನು ಅನ್ ಫಾಲೋ ಮಾಡಿದ್ದಾರೆ. ಜೊತೆಗೆ ಇನ್ಸ್ಟಾಗ್ರಾಮ್ ಡಿಪಿಯನ್ನು ಕೂಡ ತೆಗೆದು ಹಾಕಿದ್ದಾರೆ.
ವಿಜಯಲಕ್ಷ್ಮಿ ಮತ್ತು ಪವಿತ್ರಾಗೌಡರವರ ಮಧ್ಯೆ ಈ ಮಧ್ಯೆ ಸೋಷಿಯಲ್ ಮೀಡಿಯಾದಲ್ಲಿ ಕಿತ್ತಾಟ ನಡೆದಿತ್ತು.ಈ ಹಿಂದೆ ಪವಿತ್ರಾ ಗೌಡ ದರ್ಶನ್ ಜೊತೆ ಇರೋ ಫೋಟೋ ಹಂಚಿಕೊಂಡಿದ್ದರು. ‘10 ವರ್ಷಗಳ ಸಂಬಂಧ’ ಎಂದು ಟ್ಯಾಗ್ಲೈನ್ ನೀಡಿದ್ದರು. ಇದನ್ನು ವಿಜಯಲಕ್ಷ್ಮಿ ಟೀಕಿಸಿದ್ದರು.