ಬೆಂಗಳೂರು : ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20 ತನಕ ದಸರಾ ರಜೆ ಘೋಷಿಸಿದ್ದು, ಶಿಕ್ಷಣ ಇಲಾಖೆಯ ಆದೇಶದ ಪ್ರಕಾರ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆಯೂ ಒಟ್ಟು 17 ದಿನ ಇರಲಿದೆ.
2024-25ನೇ ಶೈಕ್ಷಣಿಕ ಸಾಲಿನ ದಸರಾ ರಜೆ ಅಕ್ಟೋಬರ್ 3 ರಿಂದ 20 ರವರೆಗೆ ಇರಲಿದ್ದು, ಶಿಕ್ಷಣ ಇಲಾಖೆಯ ಆದೇಶದ ಪ್ರಕಾರ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆಯೂ ಒಟ್ಟು 17 ದಿನ ಇರಲಿದೆ. ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಇದ್ದು, ಕಾರ್ಯಕ್ರಮದ ನಂತರ ರಜೆ ಸಿಗಲಿದೆ.
ಅಕ್ಟೋಬರ್ 21ರಿಂದ 2ನೇ ಅವಧಿಯು ಪ್ರಾರಂಭವಾಗಲಿದ್ದು, 2025ರ ಏಪ್ರಿಲ್ 10 ತನಕ ಶಾಲೆ ನಡೆಯಲಿದೆ. 2024- 2025ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲೆಗಳು ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ.