ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರು ತಾಲೂಕಿನ ಶ್ರೀ ಗುರು ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಡಿ.6 ರಿಂದ  8 ರವರೆಗೆ ದತ್ತಜಯಂತಿ ನಡೆಯಲಿದ್ದು, ಈ ಹಿನ್ನೆಲೆ ಜಿಲ್ಲಾದ್ಯಂತ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ಇಲಾಖೆ 3500 ಮಂದಿ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಿದೆ.

ಓರ್ವ ಎಸ್ ಪಿ, 4 ಹೆಚ್ಚುವರಿ ಪೋಲಿಸ್ ಅಧಿಕ್ಷಕರು 17 ಡಿ.ವೈ.ಎಸ್ಪಿ, 39 ವೃತ್ತ ನಿರೀಕ್ಷಕರು 156 ಮಂದಿ ಪಿಎಸ್ಐಗಳು 181 ಹೆಡ್ ಕಾನ್ ಸ್ಟೇಬಲ್, 2050 ಕಾನ್ ಸ್ಟೇಬಲ್ ,100 ಮಹಿಳಾ ಮೋಲಿಸ್ ಕಾನ್ಸ್ಟೇಬಲ್, 500ಮಂದಿ ಗೃಹರಕ್ಷಕ ಸಿಬ್ಬಂದಿ, 15 ಕೆ.ಎಸ್.ಆರ್.ಪಿ ತುಕಡಿ, 25 ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ತುಕಡಿಯ ಸಿಬ್ಬಂದಿಯೂ ಸೇರಿದಂತೆ 3500 ಮಂದಿ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಬಾಬಾ ಬುಡನ್ ಗಿರಿಯ ವಿವಾದಾತ್ಮಕ ದತ್ತ ಪೀಠದಲ್ಲಿ ಡಿಸೆಂಬರ್ 6, 7, 8 ರಂದು ದತ್ತ ಜಯಂತಿಗೆ ಹೈಕೋರ್ಟ್ ಅನುಮತಿ ಮಂಜೂರಾಗಿದೆ. ತೀವ್ರ ಕುತೂಹಲ ಕೆರಳಿಸಿದ್ದ ಪ್ರಕರಣದಲ್ಲಿ ಅನುಮತಿ ನೀಡಲಾಗಿದೆ.

ಪ್ರವಾಸಿಗರಿಗೆ ನೋ ಎಂಟ್ರಿ
ದತ್ತಪೀಠದಲ್ಲಿ ದತ್ತಜಯಂತಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಗಿರಿಧಾಮಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ 5 ದಿನ ಪ್ರವೇಶ ನಿರ್ಬಂಧಿಸಲಾಗಿದೆ.ಚಿಕ್ಕಮಗಳೂರಿನಲ್ಲಿ ದತ್ತಜಯಂತಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ 5 ದಿನಗಳ ಕಾಲ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಆದೇಶ ಹೊರಡಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಕೆ ಎನ್ ರಮೇಶ್ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಡಿಸೆಂಬರ್ 6ರಿಂದ 8 ರವರೆಗೆ ದತ್ತಜಯಂತಿ ಕಾರ್ಯಕ್ರಮ ನಡೆಯಲಿದ್ದು, ಡಿಸೆಂಬರ್ 5ರ ಬೆಳಗ್ಗೆ 9 ಗಂಟೆಯಿಂದ ಡಿಸೆಂಬರ್ 9ರ ಬೆಳಗ್ಗೆ 10 ಗಂಟೆಯವರೆಗೆ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗ, ಮಾಣಿಕ್ಯಧಾರ, ಹೊನ್ನಮ್ಮನಹಳ್ಳಕ್ಕೆ ಪ್ರವಾಸಿಗರ ಭೇಟಿಯನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಈ ದಿನಗಳಲ್ಲಿ ಪ್ರವಾಸಿಗರು ಹೋಟೆಲ್, ಹೋಂ ಸ್ಟೇ ಮತ್ತು ರೆಸಾರ್ಟ್ಗಳಲ್ಲಿ ವಾಸ್ತವ್ಯಕ್ಕೆ ಕಾಯ್ದಿರಿಸಿಕೊಂಡಿದ್ದರೆ, ವಾಸ್ತವ್ಯ ಮಾಡಲು ಯಾವುದೇ ನಿರ್ಬಂಧವಿರುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

BIGG NEWS : ಬೈಕ್ ಸವಾರರೇ ಎಚ್ಚರ : ಇನ್ಮುಂದೆ ‘ಹಾಫ್ ಹೆಲ್ಮೆಟ್’ ಧರಿಸಿದ್ರೆ ಬೀಳುತ್ತೆ ದಂಡ

BIG NEWS: ಯಾವುದೇ ಕಾರಣಕ್ಕೂ ಕರ್ನಾಟಕಕ್ಕೆ ಮಹಾರಾಷ್ಟ್ರ ಸಚಿವರು ಬರುವುದಕ್ಕೆ ಬಿಡುವುದಿಲ್ಲ – ಕರವೇ ನಾರಾಯಣಗೌಡ

Share.
Exit mobile version