ಚಿಕ್ಕಮಗಳೂರು : ಮುಸ್ಲಿಮರ ತೀವ್ರ ವಿರೋಧದ ನಡುವೆಯೇ ದತ್ತಪೀಠದಲ್ಲಿ ಇಂದು ದತ್ತ ಪಾದುಕೆಗೆ ಹಿಂದೂ ಅರ್ಚಕರಿಂದ ಪೂಜೆ ಸಲ್ಲಿಸಲಾಯಿತು.
ಕಾಫಿನಾಡು ಚಿಕ್ಕಮಗಳೂರಿನಲ್ಲಿ ದತ್ತಮಾಲಾಧಾರಿಗಳ ಸಂಭ್ರಮ ಮುಗಿಲು ಮುಟ್ಟಿದ್ದು, ಜಿಲ್ಲೆಯಲ್ಲಿ ಕೇಸರಿ ಬಾವುಟಗಳು ರಾರಾಜಿಸುತ್ತಿದೆ. ಡಿ.6 ರಿಂದ 8 ರವರೆಗೆ ದತ್ತಜಯಂತಿ ನಡೆಯಲಿದ್ದು, ದತ್ತ ಮಾಲಾಧಾರಿಗಳು ದತ್ತಪೀಠಕ್ಕೆ ಸಂಭ್ರಮದಿಂದ ಹೆಜ್ಜೆ ಹಾಕುತ್ತಿದ್ದಾರೆ.ಮುಸ್ಲಿಮರ ತೀವ್ರ ವಿರೋಧದ ನಡುವೆಯೇ ಇನಾಂ ದತ್ತಾತ್ತೇಯ ಬಾಬಾಬುಡನ್ ಸ್ವಾಮಿ ದರ್ಗಾ ದಲ್ಲಿ ಇಂದು ದತ್ತ ಪಾದುಕೆಗೆ ಹಿಂದೂ ಅರ್ಚಕರಿಂದ ಪೂಜೆ ಸಲ್ಲಿಸಲಾಯಿತು. ವಿಶ್ವಹಿಂದೂ ಪರಿಷತ್, ಬಜರಂಗದಳದ ನೇತೃತ್ವದಲ್ಲ ಹಿಂದೂ ಅರ್ಚಕರು ಪೂಜೆ ಸಲ್ಲಿಸಿದರು.
ವಿವಾದಿತ ದತ್ತಪೀಠಕ್ಕೆ ಇಬ್ಬರು ಹಿಂದೂ ಅರ್ಚಕರ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು, ಆಡಳಿತ ಮಂಡಳಿಯ ಶಿಫಾರಸ್ಸಿನ ಮೇರೆಗೆ ಶೃಂಗೇರಿ ಮೂಲದ ಶ್ರೀಕಾಂತ್ ಹಾಗೂ ಚಿಕ್ಕಬಳ್ಳಾಪುರ ಮೂಲದ ಸಂದೀಪ್ ಎಂಬ ಇಬ್ಬರು ಹಿಂದೂ ಅರ್ಚಕರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು ಅರ್ಚಕರ ನೇಮಕ ಸಂಬಂಧ ರಾಜ್ಯಸರ್ಕಾರ ಆಡಳಿತ ಮಂಡಳಿ ರಚನೆ ಮಾಡಿತ್ತು. ಈ ಆಡಳಿತ ಮಂಡಳಿಯಲ್ಲಿ ಓರ್ವ ಮುಸ್ಲಿಂ ಸದಸ್ಯ ಸೇರಿ 8 ಜನರು ಇದ್ದರು. ಅರ್ಚಕರ ನೇಮಿಸುವ ಅಧಿಕಾರ ಆಡಳಿತ ಮಂಡಳಿಗೆ ಇದೆ ಎಂದು ರಾಜ್ಯ ಸರ್ಕಾರ ಸುತ್ತೋಲೆಯಲ್ಲಿ ತಿಳಿಸಿತ್ತು, ಅಂತೆಯೇ ಆಡಳಿತ ಮಂಡಳಿ ಇಬ್ಬರು ಅರ್ಚಕರನ್ನು ನೇಮಿಸಿ ಆದೇಶ ಹೊರಡಿಸಿದೆ.
ಚಿಕ್ಕಮಗಳೂರಿನ ಬಾಬಾ ಬುಡನ್ ಗಿರಿಯ ವಿವಾದಾತ್ಮಕ ದತ್ತ ಪೀಠದಲ್ಲಿ ಡಿಸೆಂಬರ್ 6, 7, 8 ರಂದು ದತ್ತ ಜಯಂತಿಗೆ ಹೈಕೋರ್ಟ್ ಅನುಮತಿ ಮಂಜೂರಾಗಿದೆ. ತೀವ್ರ ಕುತೂಹಲ ಕೆರಳಿಸಿದ್ದ ಪ್ರಕರಣದಲ್ಲಿ ಅನುಮತಿ ನೀಡಲಾಗಿದೆ.ಇನ್ನೂ, ದತ್ತಪೀಠದಲ್ಲಿ ದತ್ತಜಯಂತಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಗಿರಿಧಾಮಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ 5 ದಿನ ಪ್ರವೇಶ ನಿರ್ಬಂಧಿಸಲಾಗಿದೆ.
BIGG NEWS : ದತ್ತಜಯಂತಿ ಹಿನ್ನೆಲೆ ‘ಖಾಕಿ’ ಕಟ್ಟೆಚ್ಚರ : ಚಿಕ್ಕಮಗಳೂರಿನಲ್ಲಿ ಪೊಲೀಸರ ಪಥ ಸಂಚಲನ