ಚಿಕ್ಕಮಗಳೂರು : (Datta Peeta) ದತ್ತಪೀಠ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ನ.13 ಹಾಗೂ ನ.14 ರಂದು ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಿ ಜಿ್ಲ್ಲಾಡಳಿತ ಆದೇಶ ಹೊರಡಿಸಿದೆ.
ದತ್ತಮಾಲೆ ಅಭಿಯಾನ ಹಿನ್ನೆಲೆ ಶ್ರೀರಾಮ ಸೇನೆ ಕಾರ್ಯಕರ್ತರು ನ.13 ರಂದು ಶ್ರೀ ಗುರು ದತ್ತಾತ್ರೇಯ ಪೀಠಕ್ಕೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಪ್ರವಾಸಿಗರ ಭೇಟಿಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಕೆ ಎನ್ ರಮೇಶ್ ಆದೇಶ ಹೊರಡಿಸಿದ್ದಾರೆ.
ನವೆಂಬರ್ 13 ರ ಬೆಳಗ್ಗೆ 6 ರಿಂದ ನ.14 ರ ಬೆಳಗ್ಗೆ 10 ಗಂಟೆವರೆಗೆ ಪ್ರವಾಸಿಗರ ಪ್ರವೇಶ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ದತ್ತಪೀಠ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ನಿರ್ಬಂಧ್ಪ ಹೇರಲಾಗಿದೆ. ಆದ್ದರಿಂದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗರಿ, ದತ್ತಪೀಠಕ್ಕೆ ಬರಲು ಪ್ಲ್ಯಾನ್ ಹಾಕಿಕೊಂಡವರು ಈ ಎರಡು ದಿನ ಭೇಟಿ ನೀಡದಿರುವುದು ಒಳ್ಳೆಯದು.
ನವೆಂಬರ್ 13 ರೊಳಗೆ ದತ್ತಪೀಠದಲ್ಲಿ ಹಿಂದೂ ಅರ್ಚಕರ ನೇಮಕ : ಸರ್ಕಾರಕ್ಕೆ ಡೆಡ್ ಲೈನ್
ನವೆಂಬರ್ 13 ರೊಳಗೆ ದತ್ತಪೀಠದಲ್ಲಿ ಹಿಂದೂ ಅರ್ಚಕರ ನೇಮಕವಾಗಬೇಕು, ಇಲ್ಲವಾದಲ್ಲಿ ತೀವ್ರ ಪ್ರತಿಭಟನೆ ನಡೆಯಲಿದೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.
ನವೆಂಬರ್ 13 ರಂದು ದತ್ತಪೀಠ ಅಭಿಯಾನಕ್ಕೆ ದಿನಾಂಕ ನಿಗದಿ ಮಾಡಿರುವ ಶ್ರೀರಾಮ ಸೇನೆ, ಆ ದಿನದ ಒಳಗಾಗಿ ದತ್ತಪೀಠಕ್ಕೆ ಅರ್ಚಕರ ನೇಮಕವಾಗಬೇಕು, ಇಲ್ಲವಾದಲ್ಲಿ ಪ್ರವೀಣ್ ನೆಟ್ಟಾರು ಹತ್ಯೆಯಾದ ಸಂದರ್ಭದಲ್ಲಿ ಉಂಟಾದ ಆಕ್ರೋಶ ದತ್ತಪೀಠದಲ್ಲಿ ನಡೆಯುತ್ತದೆ ಎಂದು ಶ್ರೀರಾಮ ಸೇನೆ ರಾಜ್ಯ ಸಂಚಾಲಕ ಗಂಗಾಧರ್ ಕುಲಕರ್ಣಿ ಎಚ್ಚರಿಕೆ ನೀಡಿದ್ದಾರೆ. ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದ ಪೂಜಾ ವಿಧಾನದಲ್ಲಿ ಯಾವುದೇ ಬದಲಾವಣೆ ಮಾಡಬಾರದು. ಯಥಾಸ್ಥಿತಿ ಕಾಪಾಡಿಕೊಳ್ಳಬೇಕು ಎಂದು ಕರ್ನಾಟಕ ಹೈಕೋರ್ಟ್ (Karnataka High Court) ಇತ್ತೀಚೆಗೆ ಆದೇಶ ಹೊರಡಿಸಿದೆ.
ಎರಡೂ ಧರ್ಮದ ಸಂಪ್ರದಾಯಗಳ ಪ್ರಕಾರ ಪೂಜಾವಿಧಿ ನಡೆಸಲು ಮುಜಾವರ್ ಹಾಗೂ ಅರ್ಚಕರಿಗೆ ಅವಕಾಶ ನೀಡಲಾಗಿದೆ’ ಎಂದು ಸಂಪುಟದಲ್ಲಿ ನಿರ್ಧರಿಸಲಾಗಿತ್ತು.ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸೈಯದ್ ಗೌಸ್ ಮೊಹಿಯುದ್ದೀನ್ ಶಾಖಾದ್ರಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಾಲಯವು ಆದೇಶ ಹೊರಡಿಸಿದೆ.
ಚಿಕ್ಕಮಗಳೂರಿನ ಶ್ರೀ ಗುರು ದತ್ತಾತ್ರೇಯ ಪೀಠದಲ್ಲಿ ಧಾರ್ಮಿಕ ವಿಧಿಗಳನ್ನು ನೆರವೇರಿಸಲು ಮುಜಾವರ್ ಜೊತೆ ಆಗಮಶಾಸ್ತ್ರ ಗೊತ್ತಿರುವ ಹಿಂದೂ ಅರ್ಚಕರನ್ನು ನೇಮಿಸಲು ಸರ್ಕಾರ ತೀರ್ಮಾನಿಸಿತ್ತು. ಈ ಸಂಬಂಧ ಕಳೆದ ಆಗಸ್ಟ್ 19 ರಂದು ಸುತ್ತೋಲೆ ಹೊರಡಿಸಿದ್ದು, ಹಿಂದೂ ಮತ್ತು ಮುಸ್ಲಿಂ ಧರ್ಮಗಳ ಪ್ರತಿನಿಧಿಗಳು ಇರುವ ವ್ಯವಸ್ಥಾಪನಾ ಸಮಿತಿ ರಚಿಸಬೇಕು. ಅರ್ಚಕ ಮತ್ತು ಮುಜಾವರ್ ಅವರನ್ನು ಈ ವ್ಯವಸ್ಥಾಪನಾ ಸಮಿತಿಯಿಂದಲೇ ನೇಮಿಸಬೇಕು ಎಂದು ಸೂಚನೆ ನೀಡಿತ್ತು.
BREAKING NEWS : ಬೆಂಗಳೂರಿನಲ್ಲಿ ‘KSRTC’ ಬಸ್ ಗೆ ಮತ್ತೋರ್ವ ಬೈಕ್ ಸವಾರ ಬಲಿ
BIGG NEWS : ‘ರಾಜ್ಯದಲ್ಲಿ ಹೊಸದಾಗಿ 5 ಏರ್ಪೋರ್ಟ್ ಗಳ ನಿರ್ಮಾಣ’ : ಸಚಿವ ಮುರುಗೇಶ್ ನಿರಾಣಿ |Murugesh Nirani
BREAKING NEWS : ಬೆಂಗಳೂರಿನಲ್ಲಿ ‘KSRTC’ ಬಸ್ ಗೆ ಮತ್ತೋರ್ವ ಬೈಕ್ ಸವಾರ ಬಲಿ