ಚಿಕ್ಕಮಗಳೂರು : ನಾಳೆಯಿಂದ ಚಿಕ್ಕಮಗಳೂರಿನ ದತ್ತಪೀಠದಲ್ಲಿ ದತ್ತ ಜಯಂತಿ ಕಾರ್ಯಕ್ರಮ ನಡೆಯಲಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ದತ್ತಪೀಠದ ಹೋರಾಟಕ್ಕೆ ಗೆಲುವು ಸಿಕ್ಕಿದ್ದು, ಹಿಂದೂ ಅರ್ಚಕರ ನೇಮಕ ಮಾಡಿ ಸರ್ಕಾರ ಆದೇಶಿಸಿದೆ. ಈ ಕುರಿತು ಬಿಜೆಪಿ ಶಾಸಕ ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದು, ಹೋರಾಟದಲ್ಲಿ ನಮಗೆ ಗೆಲುವು ಸಿಕ್ಕಿದ್ದು, ಹಿಂದೂ ಅರ್ಚಕರ ನೇಮಕವಾಗಿದೆ. ಇನ್ನೊಂದು ಹಂತದಲ್ಲಿ ನಾವು ಹೋರಾಟಕ್ಕೆ ಸಿದ್ದವಾಗಿದ್ದೇವೆ ಎಂದು ಸಿಟಿ ರವಿ ಹೇಳಿದ್ದಾರೆ. ಸುಪ್ರೀಂ ಕೋರ್ಟ್ ವರೆಗೂ ಹೋಗಿ ಒಂದು ಹಂತದಲ್ಲಿ ಜಯ ಸಾಧಿಸದ್ದೇವೆ. ಜಾಗದ ವಿವಾದದಲ್ಲಿ 2ನೇ ಹಂತದ ಹೋರಾಟಕ್ಕೆ ಸಿದ್ದತೆ ಮಾಡಲಾಗುತ್ತಿದೆ ಎಂದಿದ್ದಾರೆ.
ದತ್ತಪೀಠವೇ ಬೇರೆ, ದರ್ಗಾವೇ ಬೇರೆ, ದತ್ತಪೀಠ ಹಾಗೂ ದರ್ಗಾ ಎರಡೂ ಗ್ರಾಮಗಳೇ ಬೇರೆ, ಅದನ್ನು ಒಟ್ಟು ಮಾಡಿದ್ದು, ಸರಿಯಲ್ಲ. ಐ.ಡಿ. ಪೀಠದಲ್ಲಿರುವುದು ದತ್ತಪೀಠ, ನಾಗೇನಹಳ್ಳಿಯಲ್ಲಿ ಇರುವುದು ಬಾಬಬುಡನ್ ದರ್ಗಾ ಎರಡು ಪ್ರತ್ಯೇಕ ಜಾಗದಲ್ಲಿದೆ ಎನ್ನುವ ಎರಡನೇ ಹಂತದ ಹೋರಾಟಕ್ಕೆ ಸಿದ್ದತೆ ನಡೆಸಲಾಗುತ್ತದೆ ಎಂದು ಸಿ.ಟಿ.ರವಿ ನೀಡಿದ್ದಾರೆ.
ವಿವಾದಿತ ದತ್ತಪೀಠಕ್ಕೆ ಇಬ್ಬರು ಹಿಂದೂ ಅರ್ಚಕರ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆಡಳಿತ ಮಂಡಳಿಯ ಶಿಫಾರಸ್ಸಿನ ಮೇರೆಗೆ ಶೃಂಗೇರಿ ಮೂಲದ ಶ್ರೀಕಾಂತ್ ಹಾಗೂ ಚಿಕ್ಕಬಳ್ಳಾಪುರ ಮೂಲದ ಸಂದೀಪ್ ಎಂಬ ಇಬ್ಬರು ಹಿಂದೂ ಅರ್ಚಕರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಅರ್ಚಕರ ನೇಮಕ ಸಂಬಂಧ ರಾಜ್ಯಸರ್ಕಾರ ಆಡಳಿತ ಮಂಡಳಿ ರಚನೆ ಮಾಡಿತ್ತು. ಈ ಆಡಳಿತ ಮಂಡಳಿಯಲ್ಲಿ ಓರ್ವ ಮುಸ್ಲಿಂ ಸದಸ್ಯ ಸೇರಿ 8 ಜನರು ಇದ್ದರು. ಅರ್ಚಕರ ನೇಮಿಸುವ ಅಧಿಕಾರ ಆಡಳಿತ ಮಂಡಳಿಗೆ ಇದೆ ಎಂದು ರಾಜ್ಯ ಸರ್ಕಾರ ಸುತ್ತೋಲೆಯಲ್ಲಿ ತಿಳಿಸಿತ್ತು, ಅಂತೆಯೇ ಆಡಳಿತ ಮಂಡಳಿ ಇಬ್ಬರು ಅರ್ಚಕರನ್ನು ನೇಮಿಸಿ ಆದೇಶ ಹೊರಡಿಸಿದೆ.
BIGG NEWS: ಸ್ಯಾಂಡಲ್ ವುಡ್ ಹಿರಿಯ ನಟ ದ್ವಾರಕೀಶ್ಗೆ ಬೆಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್ ಪ್ರದಾನ
‘ರೌಡಿಗಳ ಭಾಗ್ಯ ಕೊಟ್ಟಿದ್ದೇ ಕಾಂಗ್ರೆಸ್’ : ಶಾಸಕ ರೇಣುಕಾಚಾರ್ಯ ವಾಗ್ಧಾಳಿ