ಚಿಕ್ಕಮಗಳೂರು : ದತ್ತಪೀಠದಲ್ಲಿ ಹಿಂದೂ ಅರ್ಚಕರ ನೇಮಕವಾಗಬೇಕು, ಇಲ್ಲವಾದಲ್ಲಿ ತೀವ್ರ ಪ್ರತಿಭಟನೆ ನಡೆಯಲಿದೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ‘ದತ್ತಪೀಠವನ್ನು ಹಿಂದೂಗಳ ಪೀಠವೆಂದು ಆದೇಶಿಸಿ, ಹಿಂದೂ ಅರ್ಚಕರ ನೇಮಿಸಬೇಕು ಎಂದು ರಾಜ್ಯ ಕಾರ್ಯಧ್ಯಕ್ಷ ಗಂಗಾಧರ್ ಕುಲಕರ್ಣಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಇದೀಗ ಈ ಕುರಿತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ,ಟಿ ರವಿ ಪ್ರತಿಕ್ರಿಯೆ ನೀಡಿದ್ದು, ದತ್ತಪೀಠಕ್ಕೆ ಅರ್ಚಕರ ನೇಮಕಕ್ಕೆ ಬೇಕಾದ ಪ್ರಕ್ರಿಯೆಗಳೆಲ್ಲವನ್ನು ಸರ್ಕಾರ ಮಾಡುತ್ತಿದೆ ಎಂದರು. ಎಲ್ಲಾ ದೇವಾಲಯಗಳಂತೆ ಇದಲ್ಲ ನಿಯಮಗಳ ಮೇಲೆ ನಡೆಯಬೇಕಿದೆ, ಕೋರ್ಟ್ ಆದೇಶದಂತೆ ನಡೆದುಕೊಳ್ಳಬೇಕಿದೆ ಎಂದರು.
ಪ್ರತಿವರ್ಷ ದತ್ತಪೀಠಕ್ಕೆ ಬಂದು ಅಲ್ಲಿ ಹೆಣ ಇಲ್ಲದ ಗೋರಿಗಳನ್ನು ನೋಡಿಕೊಂಡು ಹೋಗುವುದು ಮಾಡುತ್ತಿರುವುದನ್ನು ನೋಡಿ ನಮಗೆ ಬಿಜೆಪಿ ಸರ್ಕಾರದ ಮೇಲೆ ಹೇಸಿಗೆ ಬಂದಿದೆ , ದತ್ತಮಾಲಾ ಅಭಿಯಾ ನ. 13ರಂದು ಕೊನೆಗೊಳ್ಳಲಿದೆ. ಅಷ್ಟರೊಳಗೆ ಹಿಂದೂ ಅರ್ಚಕರ ನೇಮಿಸಬೇಕು. ಇಲ್ಲವಾದರೆ, ಪರಿಸ್ಥಿತಿ ಕಠಿಣವಾಗಲಿದೆ. ಅಲ್ಲಿ ಹಿಂದೂಗಳು ಹಾಗೂ ದತ್ತಭಕ್ತರಿಂದ ಏನಾದರೂ ಅನಾಹುತವಾದರೆ ಸರ್ಕಾರವೇ ನೇರ ಹೊಣೆ ಎಂದು ರಾಜ್ಯ ಕಾರ್ಯಧ್ಯಕ್ಷ ಗಂಗಾಧರ್ ಕುಲಕರ್ಣಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಬಾಬಾ ಬುಡನ್ ಸ್ವಾಮಿ ದರ್ಗಾದ ಪೂಜಾ ವಿಧಾನದಲ್ಲಿ ಯಾವುದೇ ಬದಲಾವಣೆ ಮಾಡಬಾರದು. ಯಥಾಸ್ಥಿತಿ ಕಾಪಾಡಿಕೊಳ್ಳಬೇಕು ಎಂದು ಕರ್ನಾಟಕ ಹೈಕೋರ್ಟ್ (Karnataka High Court) ಇತ್ತೀಚೆಗೆ ಆದೇಶ ಹೊರಡಿಸಿದೆ.
‘ಮಾತು ಆಡಿದರೆ ಹೋಯ್ತು, ಮುತ್ತು ಒಡೆದರೆ ಹೋಯ್ತು’ : ಹೇಳಿಕೆ ಹಿಂಪಡೆದ ಸತೀಶ್ ಜಾರಕಿಹೊಳಿಗೆ ಸಿಎಂ ಬೊಮ್ಮಾಯಿ ಟಾಂಗ್
BIGG NEWS : ಶೃಂಗೇರಿಯಲ್ಲಿ ಮಸೀದಿ ಎದುರು ಬಾವುಟ ಕಟ್ಟುವ ವಿಚಾರಕ್ಕೆ ಎರಡು ಕೋಮುಗಳ ನಡುವೆ ಗಲಭೆ ; ಮಾರಾಮಾರಿ