ನವದೆಹಲಿ : ಚಂಡೀಗಢ ವಿಶ್ವವಿದ್ಯಾನಿಲಯದಲ್ಲಿ ಮಹಿಳಾ ವಿದ್ಯಾರ್ಥಿನಿಯೊಬ್ಬರು ಹಲವು ವಿದ್ಯಾರ್ಥಿನಿಯರ ಕೆಲವು ಆಕ್ಷೇಪಾರ್ಹ ವಿಡಿಯೋಗಳನ್ನು ರೆಕಾರ್ಡ್ ಮಾಡಿ ಆನ್ಲೈನ್ನಲ್ಲಿ ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆಗಳು ಭುಗಿಲೆದ್ದಿವೆ. ಇತ್ತ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಇದೀಗ ಘಟನೆಯ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ.
ಘಟನೆಯನ್ನು ದುರದೃಷ್ಟಕರ ಎಂದು ಬಣ್ಣಿಸಿದ ಸಿಎಂ ಭಗವಂತ್ ಮಾನ್, ಹೆಣ್ಣುಮಕ್ಕಳು ನಮ್ಮ ಗೌರವ ಮತ್ತು ಹೆಮ್ಮೆ. ಅಂತಹ ಯಾವುದೇ ಘಟನೆಯು ಅತ್ಯಂತ ಖಂಡನೀಯ ಎಂದು ಹೇಳಿದ್ದಾರೆ.
BREAKING NEWS : ಜಮ್ಮು-ಕಾಶ್ಮೀರದ ಜಾಖ್ ಗಡಿ ಪ್ರದೇಶದಲ್ಲಿ ಶಂಕಿತ ‘ಪಾಕಿಸ್ತಾನಿ ಡ್ರೋನ್’ ಪತ್ತೆ |Pakistani drone
ಘಟನೆಯ ಬಗ್ಗೆ ಆಳವಾದ ತನಿಖೆಯನ್ನು ಕೈಗೊಳ್ಳುವಂತೆ ಜಿಲ್ಲಾಡಳಿತವನ್ನು ಕೋರಿದ್ದಾರೆ. ಈ ಘೋರ ಕೃತ್ಯ ಎಸಗಿದವರ ವಿರುದ್ಧ ಯಾರೇ ತಪ್ಪಿತಸ್ಥರನ್ನೂ ಬಿಡುವುದಿಲ್ಲ ಮತ್ತು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಜಿಲ್ಲಾಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಂಪೂರ್ಣ ಪರಿಸ್ಥಿತಿಯ ಮೇಲೆ ನಿಗಾ ಇಡುತ್ತಿದ್ದೇನೆ. ಕೆಲವು ಸಮಾಜ ವಿರೋಧಿ ಶಕ್ತಿಗಳಿಂದ ಹರಡುತ್ತಿರುವ ವದಂತಿಗಳಿಗೆ ಜನರು ಕಿವಿ ಕೊಡಬೇಡಿ. ಈ ಸೂಕ್ಷ್ಮ ವಿಚಾರದ ಬಗ್ಗೆ ವದಂತಿ ಹಬ್ಬಿಸುವವರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಮಾನ್ ಕಟ್ಟುನಿಟ್ಟಾಗಿ ಎಚ್ಚರಿಕೆ ನೀಡಿದ್ದಾರೆ.
ಏನಿದು ಪ್ರಕರಣ ?
ಮೊಹಾಲಿಯ ಚಂಡೀಗ ವಿಶ್ವವಿದ್ಯಾನಿಲಯದ ಕಾಲೇಜು ಹಾಸ್ಟೆಲ್ ವಿದ್ಯಾರ್ಥಿನಿಯರ ಅಶ್ಲೀಲ ವಿಡಿಯೋ ಲೀಕ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಆಕ್ಷೇಪಾರ್ಹ ವಿಡಿಯೋ ಸೋರಿಕೆಯಾದ ನಂತರ ಭಾರೀ ಪ್ರತಿಭಟನೆಗಳು ಭುಗಿಲೆದ್ದಿದ್ದು, ಹಲವು ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಸುದ್ದಿಗಳೂ ಹರಿದಾಡುತ್ತಿವೆ. ವಿದ್ಯಾರ್ಥಿನಿಯರು ಅರೆನಗ್ನವಾಗಿರುವ ಮತ್ತು ಸ್ನಾನ ಮಾಡುತ್ತಿರುವ ವಿಡಿಯೋಗಳಿಗೆ ಭಾರೀ ವಿರೋಧವೂ ಇದೆ. ಈ ವಿಡಿಯೋವನ್ನು ಅದೇ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಯೊಬ್ಬಳು ಮೊಬೈಲ್ ನಲ್ಲಿ ಚಿತ್ರೀಕರಿಸಿ, ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾಳೆ. ಆಕೆಯನ್ನು ವಶಕ್ಕೆ ಪಡೆದಿದ್ದಾರೆ.
BIGG NEWS : “ಮಾಜಿ ಸಿಎಂ ಸಿದ್ದರಾಮಯ್ಯ ಇಷ್ಟೋತ್ತಿಗೆ ಜೈಲಿನಲ್ಲಿರಬೇಕಿತ್ತು” ; ಸಚಿವ ಮುನಿರತ್ನ