ದಾವಣಗೆರೆ : ದಾವಣಗೆರೆಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು , ನಿಂತಿದ್ದ ಲಾರಿಗೆ ಇನ್ನೊಂದು ಲಾರಿ ಡಿಕ್ಕಿಯಾಗಿ ಸ್ಥಳದಲ್ಲಿಯೇ ಚಾಲಕ ಸಾವನ್ನಪ್ಪಿರುವ ಘಟನೆ ದಾವಣಗೆರೆ ತಾಲೂಕಿನ ಕೊಗ್ಗನೂರು ಗ್ರಾಮದ ಬಳಿ ನಡೆದಿದೆ.
ಮೃತ ಚಾಲಕನನ್ನು ಬೆಂಗಳೂರು ಮೂಲದ ಚಾಲಕ ನಿಸ್ಸಾರ್ (52) ಈ ಒಂದು ಅಪಘಾತದಲ್ಲಿ ಸಾವನಪ್ಪಿದ್ದಾನೆ. ಡಿಕ್ಕಿ ಹೊಡೆದ ರಬ್ಬಸಕ್ಕೆ ಲಾರಿ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಅಪಘಾತದ ಕುರಿತು ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








