ದಾವಣಗೆರೆ : ದಾವಣಗೆರೆ ಜಿಲ್ಲೆಯಲ್ಲಿ ಬಿಜೆಪಿಯ ಒಳ ಜಗಳ ತಾರಕಕ್ಕೆ ಏರಿದ್ದು, ಬಿಜೆಪಿಯ ಮಾಜಿ ಶಾಸಕ ಎಂ ಪಿ ರೇಣುಕಾಚಾರ್ಯ ಸ್ವಪಕ್ಷದ ವಿರುದ್ಧ ಯ ಇತ್ತೀಚಿಗೆ ಹೇಳಿಕೆಗಳನ್ನು ನೀಡುತ್ತಿದ್ದರು. ಈ ಕುರಿತು ದಾವಣಗೆರೆ ಜಿಲ್ಲೆಯ 40 ಬಿಜೆಪಿ ಮುಖಂಡರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ದೂರು ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ದಾವಣಗೆರೆ ಜಿಲ್ಲೆಯಲ್ಲಿ ಬಿಜೆಪಿಯ ಒಳ ಜಗಳ ತಾರಕಕ್ಕೇರಿದೆ ಎಂದು ತಿಳಿದುಬಂದಿದ್ದು, ಸ್ವಪಕ್ಷದವರ ವಿರುದ್ಧವೇ ಹೇಳಿಕೆ ನೀಡುತ್ತಿದ್ದ ಹಿನ್ನೆಲೆಯಲ್ಲಿ ಎಂಪಿ ರೇಣುಕಾಚಾರ್ಯಗೆ ಖಡಕ್ ಎಚ್ಚರಿಕೆ ನೀಡಲಾಗಿದೆ. ರೇಣುಕಾಚಾರ್ಯಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ರೇಣುಕಾಚಾರ್ಯ ವಿರುದ್ಧ 40 ಮುಖಂಡರು ದೂರು ಸಲ್ಲಿಸಿದ್ದರು. ಹರಿಹರ ಶಾಸಕ ಬಿಪಿ ಹರೀಶ್ ನೇತೃತ್ವದಲ್ಲಿ ಬಿಎಸ್ ಯಡಿಯೂರಪ್ಪಗೆ ದೂರು ಸಲ್ಲಿಸಲಾಗಿತ್ತು ಎಂದು ಹೇಳಲಾಗುತ್ತಿದೆ. ಸ್ವಪಕ್ಷದವರ ವಿರುದ್ಧ ಹೇಳಿಕೆ ನೀಡಿದಂತೆ ಇದೀಗ ಬಿಎಸ್ ಯಡಿಯೂರಪ್ಪ ಎಂಪಿ ರೇಣುಕಾಚಾರ್ಯಗೆ ತಾಕಿದು ಮಾಡಿದ್ದಾರೆ ಎಂದು ತಿಳಿದುಬಂದಿದೆ.