ದಾವಣಗೆರೆ : ವಿದ್ಯುತ್ ಟ್ರಾನ್ಸ್ಫಾರ್ಮರ್ ರಿಪೇರಿ ಮಾಡುತ್ತಿರುವ ವೇಳೆ ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ದಾರುಣವಾಗಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ತಾಲೂಕಿನ ಮಾಯಕೊಂಡ ಹೋಬಳಿಯ ಮಳಲಕೆರೆ ಗ್ರಾಮದಲ್ಲಿ ನಡೆದಿದೆ.
ಮೃತ ಲೈನ್ ಮ್ಯಾನ್ ಅನ್ನು ಮುತ್ತು(32) ಎಂದು ತಿಳಿದುಬಂದಿದೆ. ಕಳೆದ ಕೆಲವು ದಿನಗಳ ಹಿಂದೆ ಟಿಸಿಯಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ವಿದ್ಯುತ್ ಸಮಸ್ಯೆ ಎದುರಾಗಿತ್ತು ಹಾಗಾಗಿ ಗ್ರಾಮಸ್ಥರು ಕೆಇಬಿ ಅಧಿಕಾರಿಗಳಿಗೆ ದೂರು ನೀಡಿದ್ದರು. ಇಂದು ಲೈನ್ ಮ್ಯಾನ್ ದುರಸ್ಥಿಗೆ ಎಂದು ಆಗಮಿಸಿದ್ದ. ಈ ವೇಳೆ ಹೈ ವೋಲ್ಟೇಜ್ ವಿದ್ಯುತ್ ನಿಂದಾಗಿ ಲೈನ್ ಮ್ಯಾನ್ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಲೈನ್‌ಮ್ಯಾನ್‌ಗೆ ಕೈಗವಸು, ಶೂ, ಇತರೆ ಜೀವ ರಕ್ಷಕ ಅಗತ್ಯ ಸಲಕರಣೆಗಳಿರಬೇಕು ಆದರೆ ಕೆಇಬಿ ಸಿಬ್ಬಂದಿ ಯಾವುದೇ ಕೈಗವಸು ಶೂ ಇಲ್ಲ. ಲೈನ್ ಮ್ಯಾನ್ ಸಾವಿಗೆ ಕೆಇಬಿ ನಿರ್ಲಕ್ಷ್ಯವೇ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಮಾಯಕೊಂಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.