ದಾವಣಗೆರೆ : ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಸುಗಮವಾಗಿ ನಡೆದಿದ್ದು ಮಾರ್ಚ್ 25 ರಂದು ನಡೆದ ಪ್ರಥಮ ಭಾಷೆ ಪರೀಕ್ಷೆಯು ಸುಗಮವಾಗಿ ನಡೆದಿದ್ದು 20856 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿರುತ್ತಾರೆ.
ಜಿಲ್ಲೆಯ 82 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು 10277 ಗಂಡು, 10729 ಹೆಣ್ಣು ಸೇರಿ 21006 ಒಟ್ಟು ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ. ಇದರಲ್ಲಿ 10188 ಗಂಡು, 10668 ಹೆಣ್ಣು ಸೇರಿ 20856 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 150 ವಿದ್ಯಾರ್ಥಿಗಳು ಗೈರಾಗಿರುತ್ತಾರೆ.
ಸಹಾಯವಾಣಿ; ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರು, ಶಿಕ್ಷಕರ ಸಹಾಯಕ್ಕಾಗಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ ಸಹಾಯವಾಣಿ ಸ್ಥಾಪಿಸಲಾಗಿದೆ. ಪರೀಕ್ಷೆಗೆ ಸಂಬಂಧಿಸಿದ ಸಹಾಯಕ್ಕಾಗಿ 9964198201 ಮೊಬೈಲ್‌ಗೆ ಕರೆ ಮಾಡಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್ ತಿಳಿಸಿದ್ದಾರೆ.
ಇಂದು ಪರೀಕ್ಷೆ ನಡೆದ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಕೆ.ಕೊಟ್ರೇಶ್ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನನಗೆ ಕ್ಷೇತ್ರದ ಜನರು ಪರಿಚಯವಿರದೇ ಇರಬಹುದು, ಜನರಿಗೆ ನನ್ನ ಪರಿಚಯವಿದೆ – ಡಾ.ಸಿಎನ್ ಮಂಜುನಾಥ್
ಮೊದಲ ಬಾರಿಗೆ ‘ಗಾಝಾ ಕದನ ವಿರಾಮ’ಕ್ಕೆ ‘ವಿಶ್ವಸಂಸ್ಥೆಯ ಭದ್ರತಾ ಮಂಡಳಿ’ ಆಗ್ರಹ