ದಾವಣಗೆರೆ : ಮಹಾನಗರ ಪಾಲಿಕೆಯ ಪಟ್ಟಣ ಯೋಜನೆ ಮತ್ತು ಸುಧಾರಣೆ ಸ್ಥಾಯಿ ಸಮಿತಿಯಲ್ಲಿ ಖಾಲಿ ಇರುವ ಒಂದು ಸದಸ್ಯರ ಸ್ಥಾನಕ್ಕೆ ಸದಸ್ಯರನ್ನು ಚುನಾಯಿಸಲು ಡಿ.5 ರಂದು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಸಭೆಯನ್ನು ಆಯೋಜಿಸಲಾಗಿದೆ.
ಚುನಾವಣಾ ವೇಳಾ ಪಟ್ಟಿ: ಡಿ.5 ರಂದು ನಾಮಪತ್ರ ಸ್ವೀಕರಿಸುವ ದಿನ. ಪಾಲಿಕೆಯ ಸಭಾಂಗಣದಲ್ಲಿ ಮಧ್ಯಾಹ್ನ 3 ಗಂಟೆಗೆ ಸಭೆ ಪ್ರಾರಂಭಿಸಿ ಹಾಜರಾತಿ ಪಡೆಯುವುದು. ಹಾಜರಾತಿ ಪಡೆದ ನಂತರ ನಾಮಪತ್ರಗಳ ಪರಿಶೀಲನೆ, ಕ್ರಮಬದ್ದ ನಾಮಪತ್ರಗಳ ಘೋಷಣೆ, ಉಮೇದುವಾರಿಯನ್ನು ಹಿಂತೆಗೆದುಕೊಳ್ಳುವುದು. ಉಮೇದುವಾರರ ಪಟ್ಟಿ ಘೋಷಣೆ. ಅವಿರೋಧ ಆಯ್ಕೆಯಾದಲ್ಲಿ ಫಲಿತಾಂಶ ಘೋಷಣೆ. ಚುನಾವಣೆ ಅಗತ್ಯವಿದ್ದಲ್ಲಿ ಮತಪತ್ರಗಳ ಮೂಲಕ ಮತದಾನ ಪ್ರಕ್ರಿಯೆ ನಡೆಸಲಾಗುವುದು. ಮತಗಳ ಎಣಿಕೆ ಹಾಗೂ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪಲಿಕೆಯ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ.
ರಾಜ್ಯದ ಕಬ್ಬು ಬೆಳೆಗಾರರಿಗೆ ಸಿಹಿಸುದ್ದಿ: ಪ್ರತಿ ಮೆಟ್ರಿಕ್ ಟನ್‍ಗೆ ರೂ.3,151 ದರ ನಿಗಧಿ
BIG NEWS: ಕರ್ನಾಟಕ SSLC, ದ್ವಿತೀಯ PUC ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಹೀಗಿದೆ ವಿಷಯವಾರು ಪರೀಕ್ಷೆ