ಬೆಂಗಳೂರು: ಕೊನೆಗೂ ದಾವಣಗೆರೆ ಉಪ ಚುನಾವಣೆಯ ಕಾಂಗ್ರೆಸ್ ಟಿಕೆಟ್ ಗೊಂದಲಕ್ಕೆ ತೆರೆ ಬಿದ್ದಿದೆ. ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ನಡೆಸಿದಂತ ಮಾತುಕತೆಯ ಸಂಧಾನ ಯಶಸ್ವಿಯಾಗಿದ್ದು, ಶಾಮನೂರು ಶಿವಶಂಕರಪ್ಪ ಕುಟುಂಬಕ್ಕೆ ಟಿಕೆಟ್ ಫಿಕ್ಸ್ ಆಗಿದೆ.
ದಾವಣಗೆರೆ ವಿಧಾನಸಭಾ ಉಪ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರ ಕುಟುಂಬಕ್ಕೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡುವುದು ಖಚಿತವಾಗಿದೆ. ಸಮರ್ಥ್ ಶಾಮನೂರ್ ಅವರಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡುವುದು ಫಿಕ್ಸ್ ಆದಂತೆ ಆಗಿದೆ.
ಈ ಕುರಿತಂತೆ ಸಿಎಂ, ಡಿಸಿಎಂ ಹಾಗೂ ಸುರ್ಜೇವಾಲ ಸಂಧಾನ ಮಾತುಕತೆ ಯಶಸ್ವಿಯಾಗಿದೆ. ಈ ಹಿನ್ನಲೆಯಲ್ಲಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ ಅವರ ಪುತ್ರ ಸಮರ್ಥ್ ಶಾಮನೂರ್ ಗೆ ದಾವಣಗೆರೆ ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ನೀಡೋದು ಬಹುತೇಕ ಫೈನಲ್ ಆದಂತೆ ಆಗಿದೆ.








