ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ದಾವೂದ್ ನ ಆಪ್ತರಿಂದ ಕೊಲೆ ಬೆದರಿಕೆ ಬಂದಿದೆ ಎನ್ನಲಾಗಿದೆ. ಈ ಬಗ್ಗೆ ಭೂಗತ ಪಾತಕಿ ದಾವೂದ್ನ ಆಪ್ತರು ಪ್ರಧಾನಿ ಮೋದಿ ಹತ್ಯೆಗೆ ಸಂಚು ರೂಪಿಸುತ್ತಿದ್ದಾರೆ ಎಂಬ ಮಾಹಿತಿ ಮುಂಬೈ ಸಂಚಾರಿ ಪೊಲೀಸರ ಸಂಖ್ಯೆಗೆ ಆಡಿಯೋ ಸಂದೇಶ ಸಿಕ್ಕಿದೆಯಂತೆ. ಈ ಬಗ್ಗೆ ಮುಂಬೈ ಪೊಲೀಸರು ಅಲರ್ಟ್ ಆಗಿದ್ದು, ತನಿಖೆ ಆರಂಭಿಸಿದ್ದಾರೆ.
ಕಳೆದ ಕೆಲವು ತಿಂಗಳುಗಳಿಂದ ಬೆದರಿಕೆ ಕರೆಗಳು ಮತ್ತು ಸಂದೇಶಗಳು ಬರುತ್ತಿರುವ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ಅಲರ್ಟ್ ಆಗಿದ್ದಾರೆ. ಕೆಲವು ತಿಂಗಳ ಹಿಂದೆ ಮುಂಬೈ ಪೊಲೀಸ್ ಸಂಚಾರ ವಿಭಾಗಕ್ಕೆ ಪಾಕಿಸ್ತಾನದಿಂದ ಭಯೋತ್ಪಾದಕ ದಾಳಿಯ ಬಗ್ಗೆ ಸಂದೇಶ ಬಂದಿತ್ತು. ಇದರ ಬೆನ್ನಲ್ಲೇ ಪಶ್ಚಿಮ ಉಪನಗರದಲ್ಲಿರುವ ಹೋಟೆಲ್ ಸ್ಫೋಟಿಸುವ ಬೆದರಿಕೆ ಹಾಕಲಾಗಿತ್ತು.