ಬೆಂಗಳೂರು : ಪ್ರತಿ ತಿಂಗಳ ಅಂತ್ಯದೊಳಗೆ ಹೆಚ್ಚುವರಿ ಐದು ಕೆ.ಜಿ. ಅಕ್ಕಿಯ ಹಣ ಡಿಬಿಟಿ ಮೂಲಕ ಫಲಾನುಭವಿಗಳ ಖಾತೆಗೆ ಸಂದಾಯವಾಗುವಂತೆ ಕ್ರಮ ತೆಗೆದುಕೊಳ್ಳಬೇಕೆಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇಂದು ಆಹಾರ ನಿಗಮದಲ್ಲಿ ಸಚಿವ ಕೆಹೆಚ್. ಮುನಿಯಪ್ಪ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯನ್ನು ನಡೆಸಿದರು. ಸಭೆಯಲ್ಲಿ ಇಲಾಖೆಯಲ್ಲಿ ಪಡಿತರದಾರರಿಗೆ ಸರಬರಾಜು ಆಗುತ್ತಿರುವ ಅಕ್ಕಿ,ರಾಗಿ, ಜೋಳ, ಇವು ಗುಣಮಟ್ಟದಿಂರಬೇಕು ಎಂದು ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು.
ಇಲಾಖೆಯಲ್ಲಿ ಇರುವ ಲೋಪದೋಷಗಳನ್ನು ಸರಿಪಡಿಸಬೇಕು. ಹೊಸ ಪಡಿತರ ಚೀಟಿ ಕೋರಿ ಕಳೆದ ಐದು ವರ್ಷಗಳಿಂದ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಪರಿಶೀಲಿಸಿ ಎಪಿಎಲ್, ಬಿಪಿಎಲ್ ಕಾರ್ಡ್ಗಳನ್ನು ಗುರುತಿಸಿ ವಿಲೇವಾರಿ ಮಾಡಬೇಕು.
ಇಲಾಖೆಯಲ್ಲಿ ಪಡಿತರ ದಾರರಿಗೆ ಸರಬರಾಜು ಆಗುತ್ತಿರುವ ಅಕ್ಕಿ, ರಾಗಿ, ಜೋಳ ಇತ್ಯಾದಿ ಧಾನ್ಯಗಳ ಗುಣಮಟ್ಟ ಇರುವಂತೆ ಎಚ್ಚರವಿರಬೇಕು.ಗೌಡನ್ ಗಳಲ್ಲಿ ಸುಚಿತ್ವವನ್ನು ಕಾಪಾಡಬೇಕು ಮತ್ತು ವಿಲೇವಾರಿ ಸಂದರ್ಭದಲ್ಲಿ ಉತ್ತಮ ಗುಣಮಟ್ಟದ ಆಹಾರ ಧಾನ್ಯ ಗಳನ್ನು ಸರಬರಾಜು ಮಾಡಬೇಕು
ಈ ಸಂದರ್ಭದಲ್ಲಿ ಸರ್ಕಾರದ ಕಾರ್ಯದರ್ಶಿ ರಮಣದೀಪ್ ಚೌದರಿ,ಆಯುಕತ್ತರಾದ ವಾಸಿ ರೆಡ್ಡಿ ವಿಜಯ ಜೋತ್ನ, ಆಹಾರ ನಿಗಮ ನಿರ್ದೇಶಕ ಚಂದ್ರಕಾಂತ್,ಕಾನೂನು ಮಾಪನ ಇಲಾಖೆ ನಿಯಂತ್ರಕರಾದ ಅನಿತಾ ಲಕ್ಷ್ಮೀ, ಆಹಾರ ಆಯೋಗದ ಕಾರ್ಯದರ್ಶಿ ಸುಜಾತ ಹೊಸಮನಿ, ಸಚಿವರ ಕಾರ್ಯದರ್ಶಿ ಡಾ.ಹೆಚ್ ನಟರಾಜ್, ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.