ದಕ್ಷಿಣ ಕನ್ನಡ ಜಿಲ್ಲೆ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ( Praveen Nettaru Murder Case ) ಬಳಿಕ ಜಿಲ್ಲೆಯಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಅಲ್ಲದೇ ನಿನ್ನೆ ಮುಸ್ಲೀಂ ಯುವಕನ ಹತ್ಯೆ ಬಳಿಕ ಮತ್ತಷ್ಟು ಉದ್ವಿಗ್ನಗೊಂಡಿದೆ. ಹೀಗಾಗಿ ಇಂದಿನಿಂದ ಆಗಸ್ಟ್ 1ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಮದ್ಯಮಾರಾಟವನ್ನು ( liquor Sale )ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಈ ಕುರಿತಂತೆ ಆದೇಶ ಹೊರಡಿಸಿರುವಂತ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆವಿ ಅವರು, ದಿನಾಂಕ 26-07-2022ರಂದು ಬೆಳ್ಳಾರೆ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳ್ಳಾರೆ ಗ್ರಾಮದ ಮಾಸ್ತಿಕಟ್ಟೆಯಲ್ಲಿ ರಾತ್ರಿ ವ್ಯಾಪಾರ ಮುಗಿಸಿ ಅಂಗಡಿ ಬಾಗಿಲು ಹಾಕಿಕೊಂಡು ಮನೆಗೆ ತೆರಳೋದಕ್ಕೆ ಪ್ರವೀಣ್ ನೆಟ್ಟಾರ್ ತಮ್ಮ ಬೈಕ್ ನಲ್ಲಿ ಕುಳಿತಿದ್ದಂತ ಸಂದರ್ಭದಲ್ಲಿ, ಮೂವರು ಅಪರಿಚಿತರು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ ಪರಿಣಾಮ, ಅವರು ತೀವ್ರಗಾಯಗೊಂಡು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಈ ಹಿನ್ನಲೆಯಲ್ಲಿ ಬೆಳ್ಳಾರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪರಿಸ್ಥಿತಿ ಪ್ರಕ್ಷುಬ್ಧವಾಗಿರುತ್ತದೆ. ಮುಂದುವರೆದು ದಿನಾಂಕ 28-07-2022ರಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಮುಸ್ಲೀಂ ಯುವಕನ ಹತ್ಯೆಯ ನಂತ್ರ ಪರಿಸ್ಥಿತಿ ಮತ್ತಷ್ಟು ಬಿಗುವಾಗಿರುತ್ತದೆ.
Breaking news: ಮಾಸ್ಕೋದಲ್ಲಿ 15 ಅಂತಸ್ತಿನ ಕಟ್ಟಡದಲ್ಲಿ ಭಾರೀ ಬೆಂಕಿ ಅವಘಡ: 8 ಮಂದಿ ಸಾವು, ಹಲವರ ರಕ್ಷಣೆ
ಈ ಎಲ್ಲಾ ಕಾರಣದಿಂದಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಬಂಟ್ವಾಳ, ಪುತ್ತೂರು, ಕಡಬ, ಬೆಳ್ತಂಗಡಿ ಮತ್ತು ಸುಳ್ಯ ತಾಲೂಕುಗಳಲ್ಲಿ ಯಾವುದೇ ರೀತಿಯ ಮದ್ಯ ಮಾರಾಟ, ದಾಸ್ತಾನು, ಸಾಗಾಣಿಕೆಯನ್ನು ಮಾಡದಂತೆ ನಿರ್ಬಂಧಿಸಿ ಹಾಗೂ ಜಿಲ್ಲೆಯಾಧ್ಯಂತ ಎಲ್ಲಾ ರೀತಿಯ ಮದ್ಯದ ಅಂಗಡಿಗಳನ್ನು ದಿನಾಂಕ 29-07-2022ರಿಂದ ದಿನಾಂಕ 01-08-2022ರ ಬೆಳಿಗ್ಗೆ 8 ಗಂಟೆಯವರೆಗೆ ಮುಚ್ಚುವಂತೆ ಆದೇಶಿಸಿದ್ದಾರೆ.
ಈ ಆದೇಶವನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಅಬಕಾರಿ ಉಪ ಆಯುಕ್ತರಿಗೆ ನಿ ರ್ದೇಶಿಸಿದ್ದಾರೆ. ಜೊತೆಗೆ ನಿಷೇಧಾಜ್ಞೆ ಇರುವ ಸಮಯದಲ್ಲಿ ಬಾರ್, ವೈನ್ ಶಾಬ್ ಗಳ ಬಾಗಿಲುಗಳಿಗೆ ಅಬಕಾರಿ ಇಲಾಖೆಯ ಸೀಲು ಗಳನ್ನು ಕಡ್ಡಾಯವಾಗಿ ಮಾಡುವಂತೆ ಸೂಚಿಸಿದ್ದಾರೆ.