ಕೋಲಾರ: ನಗರದಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ ಮಳೆಯಾಗುತ್ತಿದೆ. ನಾಳೆಯೂ ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಡಿಸಿ ಆದೇಶಿಸಿದ್ದಾರೆ.
ಈ ಸಂಬಂಧ ಆದೇಶ ಹೊರಡಿಸಿರುವಂತ ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷಾ ಅವರು, ಆರೋಗ್ಯ ಇಲಾಖೆಯ ಸಲಹೆಯ ಮೇರೆಗೆ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಠಿಯಿಂದ ನಾಳೆಯೂ ಕೋಲಾರ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆಯನ್ನು ನೀಡಲಾಗಿದೆ. ರಜೆಯ ಅವಧಿಯ ತರಗತಿಗಳನ್ನು ಮುಂದಿನ ದಿನಗಳಲ್ಲಿ ಸರಿ ದೂಗಿಸುವಂತೆ ಸೂಚಿಸಿದ್ದಾರೆ.
ಬೆಂಗಳೂರಲ್ಲಿ ಶಾಲಾ-ಕಾಲೇಜುಗಳಿಗೆ ನಾಳೆ ರಜೆಯಿಲ್ಲ- DC ಜಗದೀಶ್ ಮಾಹಿತಿ
ಬೆಂಗಳೂರು: ಫೆಂಗಲ್ ಚಂಡಮಾರುತದ ಕಾರಣ ಬೆಂಗಳೂರು ನಗರದಲ್ಲೂ ತುಂತುರು ಮಳೆಯಾಗುತ್ತಿದೆ. ಚಳಿಗಾಳಿಯ ಸಹಿತ ಮಳೆಯ ಕಾರಣ ರಾಜ್ಯದ ರಾಜಧಾನಿ ಜನತೆ ತತ್ತರಿಸಿ ಹೋಗಿದ್ದಾರೆ. ಇದರ ನಡುವೆ ನಾಳೆ ಶಾಲಾ-ಕಾಲೇಜುಗಳಿಗೆ ರಜೆಯಿಲ್ಲ ಎಂಬುದಾಗಿ ಜಿಲ್ಲಾಧಿಕಾರಿ ಜಗದೀಶ್ ಮಾಹಿತಿ ನೀಡಿದ್ದಾರೆ.
ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ನಾಳೆ ಹವಾಮಾನ ಇಲಾಖೆಯಿಂದ ಬೆಂಗಳೂರು ನಗರದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ನಾಳೆ ನಗರದಲ್ಲಿ ಶಾಲಾ-ಕಾಲೇಜುಗಳಿಗೆ ರಜೆಯಿಲ್ಲ ಎಂಬುದಾಗಿ ತಿಳಿಸಿದ್ದಾರೆ.
ಮತ್ತೊಂದೆಡೆ ಕೋಲಾರ ಜಿಲ್ಲೆಯಲ್ಲಿ ನಿನ್ನೆ ಫೆಂಗಲ್ ಚಂಡಮಾರುತದ ಕಾರಣ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿತ್ತು. ನಾಳೆಯೂ ಚಂಡಮಾರುತದ ಆರ್ಭಟ ಹೆಚ್ಚಿರುವ ಕಾರಣ ಕೋಲಾರ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಡಿಸಿ ಆದೇಶಿಸಿದ್ದಾರೆ.
BIG NEWS: ಕರ್ನಾಟಕ SSLC, ದ್ವಿತೀಯ PUC ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಹೀಗಿದೆ ವಿಷಯವಾರು ಪರೀಕ್ಷೆ
BREAKING ; ಡಿಸೆಂಬರ್ 13, 14 ರಂದು ಲೋಕಸಭೆಯಲ್ಲಿ ‘ಸಂವಿಧಾನ’ ಮೇಲಿನ ಚರ್ಚೆ, ಸರ್ವಪಕ್ಷಗಳು ಭಾಗಿ