ದಕ್ಷಿಣ ಕನ್ನಡ: ಜಿಲ್ಲೆಯ ಬಂಟ್ವಾಳದಲ್ಲಿ ಅಬ್ದುಲ್ ರಹಿಮಾನ್ ಎಂಬಾತನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಹಿನ್ನಲೆಯಲ್ಲಿ ಬಿಗಿ ವಾತಾವರಣ ನಿರ್ಮಾಣವಾಗಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಡಿಸಿ ಆದೇಶಿಸಿದ್ದಾರೆ.
ಈ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾರ ಜಿಲ್ಲಾಧಿಕಾರಿ ಆನಂದ್ ಆದೇಶ ಮಾಡಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೇ.30ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಅಂತ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯ, ಕಡಬ ತಾಲ್ಲೂಕಿನ ಎಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೇ.30ರವರೆಗೆ ಬಿಎನ್ಎಸ್ 163ರಡಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂಬುದಾಗಿ ಆದೇಶದಲ್ಲಿ ಹೇಳಿದ್ದಾರೆ.
ಸ್ಮಾರ್ಟ್ ಮೀಟರ್ ಅನುಷ್ಠಾನಕ್ಕೆ ಬಿಜೆಪಿ ಅಡ್ಡಗಾಲು: ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಕಿಡಿ
BREAKING: ಮರ ಬಿದ್ದು ಸೊರಬ-ಸಾಗರ ರಸ್ತೆ ಸಂಚಾರ ಬಂದ್: ಎಚ್ಚೆತ್ತುಕೊಳ್ಳದ ಅರಣ್ಯ ಇಲಾಖೆ