ಬೆಂಗಳೂರು: ಡಿಸಿಇಟಿ ಮೂರನೇ ಹಾಗು ಅಂತಿಮ ಸುತ್ತಿನಲ್ಲಿ ಭಾಗವಹಿಸಲು ಅರ್ಹರಾಗುವ ಡಿಪ್ಲೊಮಾ ಅಭ್ಯರ್ಥಿಗಳು ತಮಗೆ ಬೇಕಾದ ಕಾಲೇಜು/ಕೋರ್ಸ್ ಆಯ್ಕೆಗೂ ಮುನ್ನ ಕಾಷನ್ ಡಿಪಾಸಿಟ್ ಪಾವತಿಸಬೇಕು. ಅದರ ನಂತರವೇ ಇಚ್ಛೆ/ಆಯ್ಕೆಗೆ ಅವಕಾಶ ನೀಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
ಮೂರನೇ ಸುತ್ತಿನಲ್ಲಿ ಭಾಗವಹಿಸಲು ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು 40,000 ರೂಗಳನ್ನು ಠೇವಣಿಯಾಗಿ ಪಾವತಿಸಬೇಕು. ಪರಿಶಿಷ್ಟ ಜಾತಿ/ವರ್ಗದ ಅಭ್ಯರ್ಥಿಗಳಿಗೆ ಇದು ರೂ 10,000 ಇರುತ್ತದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಷನ್ ಡಿಪಾಸಿಟ್ ಪಾವತಿಸದ ಅಭ್ಯರ್ಥಿಗಳು ಸೀಟು ಹಂಚಿಕೆಯಲ್ಲಿ ಭಾಗವಹಿಸಲು ಅರ್ಹರಿರುವುದಿಲ್ಲ. ಮೂರನೇ ಸುತ್ತಿನಲ್ಲಿ ಸೀಟು ಹಂಚಿಕೆಯಾದಲ್ಲಿ ಅಭ್ಯರ್ಥಿಯು ಪಾವತಿಸಿದ ಕಾಷನ್ ಡೆಪಾಟಿಟ್ ಅನ್ನು ಶುಲ್ಕಕ್ಕೆ ಹೊಂದಾಣಿಕೆ ಮಾಡಿಕೊಳ್ಳಲಾಗುವುದು. ಮೂರನೇ ಸುತ್ತಿನಲ್ಲಿ ಅಭ್ಯರ್ಥಿಗೆ ಸೀಟು ಹಂಚಿಕೆಯಾಗಿ ನಿಗದಿತ ಶುಲ್ಕ ಪಾವತಿಸದಿದ್ದಲ್ಲಿ ಅಥವಾ ಕಾಲೇಜಿಗೆ ಪ್ರವೇಶ ಪಡೆಯದಿದ್ದಲ್ಲಿ ಅಥವಾ ರದ್ದುಗೊಳಿಸಲು ಇಚ್ಛಿಸಿದಲ್ಲಿ ಕಾಷನ್ ಡಿಪಾಸಿಟ್ ಅನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು. ಜೊತೆಗೆ, ನಿಯಮಾನುಸಾರ ದಂಡವನ್ನೂ ಪಾವತಿಸಬೇಕಾಗುತ್ತದೆ. ಅಲ್ಲದೆ, ಮುಂದಿನ ವರ್ಷಗಳ ಕೌನ್ಸಿಲಿಂಗ್ ನಲ್ಲಿ ಭಾಗವಹಿಸಲು ಅರ್ಹತೆ ಕಳೆದುಕೊಳ್ಳಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.
ಅರ್ಹತೆ ಪಡೆದವರು ಆ.11ರಿಂದ 14ರೊಳಗೆ ಕಾಷನ್ ಡಿಪಾಸಿಟ್ ಪಾವತಿಸಬೇಕಾಗುತ್ತದೆ. ಆ.11ರಿಂದ 16ರವರೆಗೆ ಇಚ್ಛೆ/ಆಯ್ಕೆಗೆ ಅವಕಾಶ ನೀಡಲಾಗುವುದು.
ಸೀಟು ಹಂಚಿಕೆ ತಾತ್ಕಾಲಿಕ ಫಲಿತಾಂಶವನ್ನು ಆ.16ರಂದು ಸಂಜೆ 4ಕ್ಕೆ ಹಾಗೂ ಆ.18ರಂದು ಸಂಜೆ 4ರ ನಂತರ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ.
ಆ.12ರಂದು ದಾಖಲೆ ಪರಿಶೀಲನೆಗೆ ಕೆಇಎಗೆ ಬರುವ ಅಭ್ಯರ್ಥಿಗಳು ಅರ್ಹರಾದ ಬಳಿಕ ಕಾಷನ್ ಡಿಪಾಸಿಟ್ ಕಟ್ಟಿ, ಇಚ್ಛೆ/ಆಯ್ಕೆ ದಾಖಲಿಸಬೇಕು ಎಂದರು.
ಕಾಷನ್ ಡಿಪಾಸಿಟ್ ಇಲ್ಲ:
ಆರ್ಕಿಟೆಕ್ಟರ್ ಕೋರ್ಸ್ ಪ್ರವೇಶಕ್ಕೆ ಮತ್ತು ವೃತ್ತಿನಿರತ ಅಭ್ಯರ್ಥಿಗಳಿಗೆ ಕಾಷನ್ ಡಿಪಾಸಿಟ್ ಪಾವತಿಸುವ ಅವಶ್ಯಕತೆ ಇರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ನಾಟಿ ಔಷಧಿಗೆ ಬಲಿಯಾದವರ ಕುಟುಂಬಕ್ಕೆ ಪರಿಹಾರ ನೀಡಿ: ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ ಆಗ್ರಹ
SHOCKING : ರಾಜಸ್ಥಾನದಲ್ಲಿ `ರಾಕ್ಷಸಿ ಕೃತ್ಯ’ : ಬೀದಿ ನಾಯಿಗಳನ್ನು ಬೆನ್ನಟ್ಟಿ ಗುಂಡು ಹಾರಿಸಿ ಬರ್ಬರ ಹತ್ಯೆ.!