ಬೆಂಗಳೂರು : ಡೆಂಘೀ ಜ್ವರದಿಂದ ಬಳಲುತ್ತಿರುವ ಡಿಸಿಎಂ ಡಿ.ಕೆ.ಶಿವಕುಮಾರ್ಅವರು ವೈದ್ಯರ ಸೂಚನೆ ಮೇರೆಗೆ ಇಂದಿನಿಂದ ಮೂರು ದಿನ ವಿಶ್ರಾಂತಿ ತೆಗೆದುಕೊಳ್ಳಲಿದ್ದು, ಈ ಅವಧಿಯಲ್ಲಿ ಯಾರನ್ನೂ ಭೇಟಿ ಮಾಡುವುದಿಲ್ಲ ಎಂದು ಮೂಲಗಳು ಹೇಳಿವೆ.
ಈ ಬಗ್ಗೆ ಶಿವಕುಮಾರ್ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಅದರಲ್ಲಿ ಅನ್ಯ ಕಾರ್ಯ ನಿಮಿತ್ತ ತಾವು ಮೂರು ದಿನ ಯಾರನ್ನೂ ಭೇಟಿಯಾಗುವುದಿಲ್ಲ ಎಂದಿದ್ದಾರೆ. ಆದರೆ, ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿರುವ ಅವರು ಸಂಜೆ ವೇಳೆಗೆ ನಿತ್ರಾಣಗೊಳ್ಳುತ್ತಿರು ವುದರಿಂದವೈದ್ಯರು ಕಡ್ಡಾಯವಾಗಿ ವಿಶ್ರಾಂತಿಗೆ ಸೂಚಿಸಿದ್ದು, ಈ ಹಿನ್ನೆಲೆಯಲ್ಲಿ ಯಾರನ್ನೂ ಭೇಟಿಯಾಗದೆ ವಿಶ್ರಾಂತಿ ಪಡೆಯಲಿದ್ದಾರೆ ಎಂದು ಮೂಲಗಳು ಹೇಳಿವೆ.
I will not be available for any public engagements, including meetings with the public, party workers, or leaders, for the next three days starting tomorrow.
I sincerely regret any inconvenience this may cause and thank you for your understanding.ನಾಳೆಯಿಂದ ಮೂರು ದಿನಗಳ ಕಾಲ ಯಾರನ್ನೂ… pic.twitter.com/Pdj3kjTHzs
— DK Shivakumar (@DKShivakumar) July 21, 2025