ಮಂಡ್ಯ : ತೀವ್ರ ವಿರೋಧದ ನಡುವೆಯೂ ಕೆ.ಆರ್.ಎಸ್ ಬೃಂದಾವನದಲ್ಲಿ ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶುಕ್ರವಾರ ಸಂಜೆ 7.15ಕ್ಕೆ ಚಾಲನೆ ನೀಡಿದರು.
ವೇದ ಬ್ರಹ್ಮ ವೈದಿಕ ಭಾನುಪ್ರಕಾಶ್ ಶರ್ಮಾ ನೇತೃತ್ವದಲ್ಲಿ 50ಕ್ಕೂ ಹೆಚ್ಚಿನ ವೈದಿಕರ ತಂಡ ಮಂತ್ರ ಘೋಷಗಳನ್ನು ಮೊಳಗಿಸುವ ಮೂಲಕ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು.
ನಾಡಿನ ಪ್ರಸಿದ್ಧ ಮಠಗಳಾದ ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ನಿಶ್ಚಲಾನಂದನಾಥ ಸ್ವಾಮೀಜಿ, ಸೋಮೇಶ್ವರನಾಥ ಸ್ವಾಮೀಜಿ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ,
ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ಶಾಸಕರಾದ ರಮೇಶ ಬಂಡಿಸಿದ್ದೇಗೌಡ, ದರ್ಶನ್ ಪುಟ್ಟಣ್ಣಯ್ಯ, ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ಮಧು ಜಿ ಮಾದೇಗೌಡ, ಜಿಲ್ಲಾಧಿಕಾರಿ ಕುಮಾರ, ಸಿಇಒ ಕೆ.ಆರ್.ನಂದಿನಿ, ಮನೋಹರ್ ಪ್ರಸಾತ್ ಮುಂತಾದವರು ಪಾಲ್ಗೊಂಡಿದ್ದರು.
ಕಾವೇರಿ ಮೂರ್ತಿಗೆ ಪೂಜೆ ಸಲ್ಲಿಸಿ, ದೀಪ ಬೆಳಗಿ ಕಾವೇರಿ ಆರತಿಗೆ ಚಾಲನೆ ನೀಡಿದರು. ಬಳಿಕ ಶಿಲಾಫಲಕವನ್ನು ಸಚಿವರು ಅನಾವರಣಗೊಳಿಸಿದರು.
ಇನ್ನು ಕಾವೇರಿ ಆರತಿ ಸಂಬಂಧ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ. ಹೀಗಾಗಿ ಕಾರ್ಯಕ್ರಮವನ್ನು ಯಾವುದೇ ಕಾರಣಕ್ಕೂ ನಡೆಸಬಾರದು ಎಂದು ರೈತ ಸಂಘ ಹಾಗೂ ವಿವಿಧ ಸಂಘಟನೆಗಳು ಶುಕ್ರವಾರ ಮಂಡ್ಯದಿಂದ ಕೆ.ಆರ್.ಎಸ್ ಗೆ ಆಗಮಿಸಿ ಪ್ರತಿಭಟನೆ ಕೂಡ ನಡೆಸಲಾಗಿತ್ತು. ಇದ್ಯಾವುದಕ್ಕೂ ಕ್ಯಾರೆ ಎನ್ನದ ಡಿಸಿಎಂ ಡಿ.ಕೆ.ಶಿವಕುಮಾರ್ ಕಾವೇರಿ ಆರತಿಗೆ ಚಾಲನೆ ನೀಡಲಾಗಿದ್ದು, ರೈತ ಸಂಘ ಹಾಗೂ ವಿವಿಧ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವರದಿ : ಗಿರೀಶ್ ರಾಜ್, ಮಂಡ್ಯ
ಜಾತಿ ಸಮೀಕ್ಷೆ ವೇಳೆ ಈಡಿಗರು ಎಂದು ನಮೂದಿಸಿ: ಸೊರಬ ತಾಲ್ಲೂಕು ಮಾಜಿ ಅಧ್ಯಕ್ಷ ಕೆ.ಅಜ್ಜಪ್ಪ ಮನವಿ
ಆರೋಗ್ಯ ಸಂಜೀವಿನಿ ಜಾರಿ: ಸಿಎಂ, ಡಿಸಿಎಂಗೆ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್ ಧನ್ಯವಾದ
ಚಿಕ್ಕಮಗಳೂರಿನ ಸಂಸೆ ಗ್ರಾಮಸ್ಥರ ಮನವಿಗೆ ಸಚಿವ ಈಶ್ವರ ಖಂಡ್ರೆ ಸ್ಪಂದನೆ: ಪುಂಡಾನೆ ಸೆರೆಗೆ ಆದೇಶ