Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಳಗಾವಿಯಲ್ಲಿ 100 ಕೋಟಿ ವೆಚ್ಚದಲ್ಲಿ ತಿರುಪತಿ ವೆಂಕಟೇಶ್ವರ ದೇವಸ್ಥಾನ ನಿರ್ಮಾಣ: ಟಿಟಿಡಿ ಸದಸ್ಯ ನರೇಶ್ ಕುಮಾರ್

21/04/2026 8:45 PM

ಪಶ್ಚಿಮ ಏಷ್ಯಾದಿಂದ ತವರಿಗೆ ಮರಳಿದ 11.6 ಲಕ್ಷ ಭಾರತೀಯರು: ಇರಾಕ್ ಸಂಘರ್ಷದ ಸುಳಿಯಲ್ಲಿ ಸಿಲುಕಿದ್ದ 12 ನಾವಿಕರ ಯಶಸ್ವಿ ರಕ್ಷಣೆ

21/04/2026 8:40 PM

ಒಂದು ಹನಿ ನೀರಿಗೂ ಹಾಹಾಕಾರ, ಪತ್ರಕರ್ತರಿಗೂ ಇಲ್ಲ ರಕ್ಷಣೆ: ಗಾಜಾದಲ್ಲಿ ಅಮಾನವೀಯತೆಯ ಪರಾಕಾಷ್ಠೆ

21/04/2026 8:39 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜೀನಾಮೆ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್: ಕಾರಣವೇನು ಗೊತ್ತಾ?
KARNATAKA

ರಾಜೀನಾಮೆ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್: ಕಾರಣವೇನು ಗೊತ್ತಾ?

By kannadanewsnow0905/12/2025 3:56 PM

ಬೆಂಗಳೂರು: “ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ ಸುಳ್ಳು ಹೇಳಿದ್ದರೆ ಇಂದೇ ರಾಜೀನಾಮೆ ನೀಡುವೆ, ಇಲ್ಲವಾದರೆ ಅವರು ರಾಜೀನಾಮೆ ನೀಡುತ್ತಾರಾ..” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸವಾಲೆಸೆದರು.

ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.

ವಾಚ್ ಕದ್ದದ್ದೋ, ಕೊಂಡದ್ದೋ ಎಂಬ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಾರಾಯಣಸ್ವಾಮಿ ಅವರಿಗೆ ಇನ್ನೂ ಅನುಭವವಿಲ್ಲ. ಯಾವುದಾದರೂ ವಿಚಾರದ ಬಗ್ಗೆ ಮಾತನಾಡಬೇಕಾದರೆ ಕನಿಷ್ಟ ಪರಿಜ್ಞಾನ ಇರಬೇಕು. ಬರೀ ಪ್ರಚಾರಕ್ಕೆ ಮಾತನಾಡುವುದಲ್ಲ. ಅವರಿಗಿಂತ ಹೆಚ್ಚು ಜವಾಬ್ದಾರಿಯಿಂದ ನಾನು ವರ್ತಿಸುತ್ತೇನೆ. ಅವರೂ ಜವಾಬ್ದಾರಿಯಿಂದ ಕೆಲಸ ಮಾಡುವುದನ್ನು ಕಲಿಯಬೇಕು. ನಾನು ಪ್ರದರ್ಶಿಸಿರುವ ದಾಖಲೆ ವಿಚಾರ ಒತ್ತಟ್ಟಿಗೆ ಇರಲಿ, ಅವರೇ ಹೋಗಿ ಲೋಕಾಯುಕ್ತದಲ್ಲಿ ಪರಿಶೀಲನೆ ಮಾಡಲಿ. ಅಲ್ಲಿ ಸಲ್ಲಿಸಿರುವ ಆದಾಯ ಅಫಿಡವಿಟ್ ಸಾರ್ವಜನಿಕ ದಾಖಲೆಯಾಗಿದ್ದು, ಅದನ್ನು ಅವರೂ ಪಡೆಯಬಹುದು.

2018 ಹಾಗೂ 2023ರಲ್ಲಿ ತೋರಿಸಿಲ್ಲ ಎಂಬುದು ಅವರ ವಾದ ಎಂದು ಕೇಳಿದಾಗ, “ಅವರಿಗೇನು ಗೊತ್ತು? 2025 ರಲ್ಲೂ ಸಲ್ಲಿಕೆ ಮಾಡಿದ್ದೀನಲ್ಲಾ..?” ಎಂದು ತಿಳಿಸಿದರು.

ಈ ವಿಚಾರವನ್ನು ಸದನದಲ್ಲಿ ಪ್ರಸ್ತಾಪಿಸುತ್ತಾರಂತೆ ಎಂದು ಕೇಳಿದಾಗ, “ಸದನದಲ್ಲೂ ಪ್ರಸ್ತಾಪಿಸಲಿ, ಬೇರೆ ಎಲ್ಲಾದರೂ ಪ್ರಸ್ತಾಪಿಸಲಿ. ಯಾರು ಬೇಡ ಎನ್ನುತ್ತಾರೆ. ದೇಶದೆಲ್ಲೆಡೆ ಚರ್ಚೆ ಮಾಡಲಿ. ನನ್ನ ದಾಖಲೆ ಅವರಿಗೆ ತೋರಿಸುವ ಅಗತ್ಯವಿಲ್ಲವಾದರೂ ನಾನು ಆ ವಾಚ್ ಕದ್ದಿದ್ದೇನೆ ಎಂದು ಹೇಳಿದ್ದಾರಲ್ಲ ಅದಕ್ಕೆ ತೋರಿಸಿರುವೆ” ಎಂದು ತಿರುಗೇಟು ನೀಡಿದರು.

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ:

ಇದಕ್ಕೂ ಮುನ್ನ ಗುರುವಾರ ಬೆಳಗ್ಗೆ ಟ್ವೀಟ್ ಮೂಲಕ ನಾರಾಯಣಸ್ವಾಮಿ ಅವರಿಗೆ ತಿರಗೇಟು ನೀಡಿದ ಶಿವಕುಮಾರ್ ಅವರು, “ಮಿಸ್ಟರ್ ನಾರಾಯಣಸ್ವಾಮಿ, ಇಲ್ಲಿದೆ ನೋಡಿ ಲೋಕಾಯುಕ್ತಕ್ಕೆ ನಾನು ಸಲ್ಲಿಸಿರೋ ಅಫಿಡವಿಟ್! ಜವಾಬ್ದಾರಿಯುತ ಸ್ಥಾನದಲ್ಲಿರೋ ನೀವು ನಿಮ್ಮ ಬಾಯಿ ತೆವಲಿಗಾಗಿ ಮನಸ್ಸಿಗೆ ಬಂದಂತೆ ಸುಳ್ಳು ಹೇಳಬಾರದು. ಇದು ನಿಮಗೆ ಘನತೆ ತರುವುದಿಲ್ಲ. ನಾನು ಪಾರದರ್ಶಕ ವ್ಯಕ್ತಿ. ಏನನ್ನೂ ಮುಚ್ಚಿಟ್ಟುಕೊಳ್ಳಬಾರದು ಅಂತಲೇ ನಿಜ ಹೇಳಿದ್ದೇನೆ. ನನಗೆ ಮತ್ತು ಸಿಎಂ ಸಿದ್ದರಾಮಯ್ಯ ಅವರಿಗೆ ನಮಗೆ ಇಷ್ಟವಾದ ವಾಚ್ ಕಟ್ಟಿಕೊಳ್ಳುವ ಯೋಗ್ಯತೆ ಇಲ್ಲವೇ? ಹಕ್ಕು ಇಲ್ಲವೇ..? “ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ” ಆಡಬೇಡಿ. ನಿಮಗಿರೋ ಸಾಂವಿಧಾನಿಕ ಅಧಿಕಾರ, ಜವಾಬ್ದಾರಿಯನ್ನು ವಿವೇಕದಿಂದ ನಿರ್ವಹಿಸಿ. ಅವಿವೇಕಿಯಂತೆ ಆಡಬೇಡಿ..! ಬೇಕಿದ್ದರೆ ಲೋಕಾಯುಕ್ತ ಕಚೇರಿಗೆ ಹೋಗಿ ನನ್ನ ಅಫಿಡವಿಟ್ ಚೆಕ್ ಮಾಡಿಕೊಳ್ಳಿ” ಎಂದು ಹರಿಹಾಯ್ದರು.

ರಾಜ್ಯದಲ್ಲಿ ಕೈಗಾರಿಕಾ ತಂತ್ರಜ್ಞಾನ ನಾವೀನ್ಯತೆ ಪಾರ್ಕ್ ಸ್ಥಾಪನೆಗೆ ತೈವಾನಿನ ಅಲಿಜನ್ಸ್ ಗ್ರೂಪ್‌ನಿಂದ 1,000 ಕೋಟಿ ಹೂಡಿಕೆ

Share. Facebook Twitter LinkedIn WhatsApp Email

Related Posts

ಬೆಳಗಾವಿಯಲ್ಲಿ 100 ಕೋಟಿ ವೆಚ್ಚದಲ್ಲಿ ತಿರುಪತಿ ವೆಂಕಟೇಶ್ವರ ದೇವಸ್ಥಾನ ನಿರ್ಮಾಣ: ಟಿಟಿಡಿ ಸದಸ್ಯ ನರೇಶ್ ಕುಮಾರ್

21/04/2026 8:45 PM2 Mins Read

ಸಾಗರದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಅದ್ಧೂರಿ ಶಂಕರ ಜಯಂತಿ ಆಚರಣೆ

21/04/2026 8:13 PM2 Mins Read

ಗುರುಗಳು ಹೇಳಿದ ಆ ಮಾತೇ ಆ ಯುವಕನ ಬದುಕು ಬದಲಿಸಿತು. ಅದೇನು ಅಂತ ಈ ಸುದ್ದಿ ಓದಿ!

21/04/2026 7:36 PM3 Mins Read
Recent News

ಬೆಳಗಾವಿಯಲ್ಲಿ 100 ಕೋಟಿ ವೆಚ್ಚದಲ್ಲಿ ತಿರುಪತಿ ವೆಂಕಟೇಶ್ವರ ದೇವಸ್ಥಾನ ನಿರ್ಮಾಣ: ಟಿಟಿಡಿ ಸದಸ್ಯ ನರೇಶ್ ಕುಮಾರ್

21/04/2026 8:45 PM

ಪಶ್ಚಿಮ ಏಷ್ಯಾದಿಂದ ತವರಿಗೆ ಮರಳಿದ 11.6 ಲಕ್ಷ ಭಾರತೀಯರು: ಇರಾಕ್ ಸಂಘರ್ಷದ ಸುಳಿಯಲ್ಲಿ ಸಿಲುಕಿದ್ದ 12 ನಾವಿಕರ ಯಶಸ್ವಿ ರಕ್ಷಣೆ

21/04/2026 8:40 PM

ಒಂದು ಹನಿ ನೀರಿಗೂ ಹಾಹಾಕಾರ, ಪತ್ರಕರ್ತರಿಗೂ ಇಲ್ಲ ರಕ್ಷಣೆ: ಗಾಜಾದಲ್ಲಿ ಅಮಾನವೀಯತೆಯ ಪರಾಕಾಷ್ಠೆ

21/04/2026 8:39 PM

ಕೇರಳ ಪಟಾಕಿ ಮಳಿಗೆ ಅಗ್ನಿ ದುರಂತ: ಪ್ರಧಾನಿ ಮೋದಿ ಸಂತಾಪ; ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ ಘೋಷಣೆ

21/04/2026 8:30 PM
State News
KARNATAKA

ಬೆಳಗಾವಿಯಲ್ಲಿ 100 ಕೋಟಿ ವೆಚ್ಚದಲ್ಲಿ ತಿರುಪತಿ ವೆಂಕಟೇಶ್ವರ ದೇವಸ್ಥಾನ ನಿರ್ಮಾಣ: ಟಿಟಿಡಿ ಸದಸ್ಯ ನರೇಶ್ ಕುಮಾರ್

By kannadanewsnow0921/04/2026 8:45 PM KARNATAKA 2 Mins Read

ಬೆಳಗಾವಿ‌ : ಗಡಿಜಿಲ್ಲೆ ಬೆಳಗಾವಿ ನಗರದ ಹೊರವಲಯದಲ್ಲಿರುವ ಕೋಳಿಕೊಪ್ಪ (𝗞𝗼𝗹𝗶𝗸𝗼𝗽𝗽𝗮) ಗ್ರಾಮದ ಬೆಟ್ಟದ ಮೇಲೆ ಬರೋಬ್ಬರಿ 𝟭𝟬𝟬 ಕೋಟಿ ರೂ.…

ಸಾಗರದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಅದ್ಧೂರಿ ಶಂಕರ ಜಯಂತಿ ಆಚರಣೆ

21/04/2026 8:13 PM

ಗುರುಗಳು ಹೇಳಿದ ಆ ಮಾತೇ ಆ ಯುವಕನ ಬದುಕು ಬದಲಿಸಿತು. ಅದೇನು ಅಂತ ಈ ಸುದ್ದಿ ಓದಿ!

21/04/2026 7:36 PM

ಬಸವಾದಿ ಶರಣರ ತತ್ವಗಳು ಸಮಾಜದ ಪ್ರಗತಿಗೆ ಪೂರಕ: ಶಾಸಕ ಗೋಪಾಲಕೃಷ್ಣ ಬೇಳೂರು

21/04/2026 7:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.