ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ನಾಳೆ ಬೆಳಗ್ಗೆ 9.50ರ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳಸಲಿದ್ದಾರೆ. ಅವರ ದೆಹಲಿಯ ಪ್ರಯಾಣವು ತೀವ್ರ ಕುತೂಹಲ ಮೂಡಿಸಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ಸಿಎಂ ಬದಲಾವಣೆಯ ಚರ್ಚೆ ನಡುವೆ, ಡಿಸಿಎಂ ಡಿ.ಕೆ ಶಿವಕುಮಾರ್ ನಾಳೆ ಬೆಳಗ್ಗೆ 9.50ಕ್ಕೆ ದೆಹಲಿಗೆ ವಿಮಾನದ ಮೂಲಕ ಪ್ರಯಾಣ ಬೆಳಸಲಿದ್ದಾರೆ.
ಅಸ್ಸಾಂ ವಿಧಾನಸಭಾ ಚುನಾವಣೆ ಸಂಬಂಧ ಪ್ರಿಯಾಂಕ್ ಗಾಂಧಿ ಅವರು ಪ್ರಮುಖರೊಂದಿಗೆ ಚರ್ಚಿಸೋದಕ್ಕೆ ಪೂರ್ವಭಾವಿ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಭಾಗಿಯಾಗೋದಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ತೆರಳುತ್ತಿದ್ದಾರೆ ಎನ್ನಲಾಗಿದೆ.
ನಾಳೆ ಸಂಜೆ ಅಸ್ಸಾಂ ವಿಧಾನಸಭಾ ಚುನಾವಣೆ ಪೂರ್ವಭಾವಿ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಭಾಗಿಯಾಗೋದಕ್ಕೆ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ ಎಂದು ಹೇಳಲಾಗುತ್ತಿದೆ.








