Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಭಾರತ್ ಮಂಟಪದಲ್ಲಿ ‘ಇಂಡಿಯಾ AI ಇಂಪ್ಯಾಕ್ಟ್ ಎಕ್ಸ್ ಪೋ’ ಉದ್ಘಾಟಿಸಿದ ಪ್ರಧಾನಿ ಮೋದಿ

16/02/2026 6:58 PM

BREAKING : ಜೆಇಇ ಮುಖ್ಯ ಪರೀಕ್ಷೆ ಫಲಿತಾಂಶ ಬಿಡುಗಡೆ ; ರಿಸಲ್ಟ್ ನೋಡಲು ನೇರ ಲಿಂಕ್ ಇಲ್ಲಿದೆ! JEE Main results

16/02/2026 6:37 PM

GOOD NEWS: ರಾಜ್ಯದ 108 ಆಂಬುಲೆನ್ಸ್ ಸಿಬ್ಬಂದಿಗಳಿಗೆ ಭರ್ಜರಿ ಸಿಹಿಸುದ್ದಿ: ಬೋನಸ್, ಪ್ರೋತ್ಸಾಹಧನಕ್ಕೆ ಸರ್ಕಾರ ಗ್ರೀನ್ ಸಿಗ್ನಲ್

16/02/2026 6:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಡಿಸಿಎಂ ಡಿ.ಕೆ ಶಿವಕುಮಾರ್ ‘ಗೃಹ ಖಾತೆ’ ಒತ್ತುವರಿ ಮಾಡಿಕೊಂಡಿದ್ದಾರೆ: ‘HDK’ ಗಂಭೀರ ಆರೋಪ
KARNATAKA

ಡಿಸಿಎಂ ಡಿ.ಕೆ ಶಿವಕುಮಾರ್ ‘ಗೃಹ ಖಾತೆ’ ಒತ್ತುವರಿ ಮಾಡಿಕೊಂಡಿದ್ದಾರೆ: ‘HDK’ ಗಂಭೀರ ಆರೋಪ

By kannadanewsnow0909/01/2026 6:38 PM

ನವದೆಹಲಿ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಿರಿಯರಾದ ಡಾ. ಜಿ. ಪರಮೇಶ್ವರ್ ಅವರು ನಿರ್ವಹಿಸುತ್ತಿರುವ ಗೃಹ ಖಾತೆಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಆರೋಪಿಸಿದ್ದಾರೆ.

ಈ ಬಗ್ಗೆ ಡಿಸಿಎಂ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ತಮ್ಮ ಅನುಭವದ ಬಗ್ಗೆ ಮಾತನಾಡಿರುವ ಬಗ್ಗೆಯೂ ತಿರುಗೇಟು ನೋಡಿದ್ದಾರೆ.

ಡಿಸಿಎಂ ಡಿ.ಕೆ. ಶಿವಕುಮಾರ್ ಅವರೇ, ನಮ್ಮ ವಿಲೀನದ ಚಿಂತೆ ಪಕ್ಕಕ್ಕೆ ಇಡಿ. ನನ್ನ ಮತ್ತು ನಿಮ್ಮ ಆಡಳಿತಾನುಭವದ ಬಗ್ಗೆ ಮಾತನಾಡೋಣ. ನಾನು ಎರಡು ಸಣ್ಣ ಅವಧಿಗೆ ಮುಖ್ಯಮಂತ್ರಿ, ಅಲ್ಪ ಅವಧಿಗೆ ಪ್ರತಿಪಕ್ಷ ನಾಯಕ. ಈಗ ಕೇಂದ್ರ ಮಂತ್ರಿ. ನೀವೂ ಸುದೀರ್ಘ ಅವಧಿಗೆ ಶಾಸಕ, ಅನೇಕ ಬಾರಿ ಮಂತ್ರಿ. ಈಗ ಮಂತ್ರಿ ಅಲಿಯಾಸ್ ಉಪ ಮುಖ್ಯಮಂತ್ರಿ! ನಮ್ಮಿಬ್ಬರ ಆಡಳಿತಾನುಭವದ ಬಗ್ಗೆ ನೀವು ಹೇಳುವುದಲ್ಲ, ಜನರನ್ನೇ ಕೇಳಬೇಕು ಎಂದು ಟಾಂಗ್ ನೀಡಿದ್ದಾರೆ.

ಕೊಳ್ಳೆ, ಸುಲಿಗೆ, ಬೇಲಿ, ಚದರಡಿ, ಕಮಿಷನ್, ಫಿಕ್ಸಿಂಗ್, ಒದ್ದು ಕಿತ್ತುಕೊಳ್ಳುವುದು ನನ್ನ ಎಕ್ಸ್ ಪೀರಿಯನ್ಸ್ ಅಲ್ಲಾ ಡಿಕೆಶಿರವರೇ.. ಏನೋ.. ಜನರ ಆಶೀರ್ವಾದ ಮತ್ತು ದೇವರ ದಯೆಯಿಂದ ಸಿಕ್ಕಿದ ಅವಕಾಶದಲ್ಲಿ ಜನರಿಗೆ ಕೈಲಾದ ಸಹಾಯ ಮಾಡುವ ಹುಲು ರಾಜಕಾರಣಿ ನಾನಷ್ಟೇ. ನಿಮಗೆ ಸಿದ್ಧಿಸಿರುವ ಅಂತಹ ಭಾರೀ ಅನುಭವ ನನಗಿಲ್ಲ.. ವಿನಮ್ರವಾಗಿ ಒಪ್ಪಿಕೊಳ್ಳುವೆ ಎಂದು ವ್ಯಂಗ್ಯವಾಡಿದ್ದಾರೆ.

ನಿಮಗೆ ಭೂ ಕಬ್ಜ, ಒತ್ತುವರಿ ಕರತಲಾಮಲಕ. ಅದೇ ರೀತಿ ಮತ್ತೊಬ್ಬ ಸಚಿವರ ಖಾತೆಯನ್ನು ಒತ್ತುವರಿ ಮಾಡುವುದರಲ್ಲಿಯೂ ನೀವು ನಿಸ್ಸೀಮರು. ಅದನ್ನಷ್ಟೇ ನಾನು ಹೇಳಿದ್ದು. ತಾವು ಡಿಸಿಎಂ ಆಗಿರಬಹುದು. ಆದರೆ ಮಂತ್ರಿ ಪದವಿಗೆ ಇರುವಷ್ಟೇ ಶಿಷ್ಟಾಚಾರ, ಅಧಿಕಾರ ವ್ಯಾಪ್ತಿ ಆ ಹುದ್ದೆಗಿದೆ ಎನ್ನುವುದು ಗೊತ್ತಿಲ್ಲವೇ? ಅದಕ್ಕೇನು ಎಕ್ಸ್’ಟ್ರಾ ಕೊಂಬು, ಕೋಡು ಇರಲ್ಲ. ಇರಲಿ ಎಂದು ತಾವು ಸಿಕ್ಕಿಸಿಕೊಳ್ಳೋದಕ್ಕೂ ಬರಲ್ಲ. ನಿಮ್ಮ ಎಕ್ಸ್’ಪೀರಿಯನ್ಸ್ ಗೆ ಈ ಸಣ್ಣ ವಿಷಯವೂ ತಟ್ಟಲಿಲ್ಲವೇ ಮಿಸ್ಟರ್ ಡಿಕೆಶಿ ಅವರೇ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ ಕೇಂದ್ರ ಸಚಿವರು.

ಬಳ್ಳಾರಿಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆಯನ್ನು ಗೃಹ ಸಚಿವರೇ ನಡೆಸಬೇಕಿತ್ತು. ಅದು ಅವರ ಅಧಿಕಾರ ವ್ಯಾಪ್ತಿ. ಅವರು ಬಿಟ್ಟರೆ ಮುಖ್ಯಮಂತ್ರಿಗಳು ಅಂಥ ಸಭೆ ನಡೆಸಬಹುದು. ನೀವು ಸಭೆ ನಡೆಸಿದ್ದು ಶಿಷ್ಟಾಚಾರ, ಅಧಿಕಾರದ ಸ್ಪಷ್ಟ ಉಲ್ಲಂಘನೆ. ಇದನ್ನು ಆಡಳಿತಾನುಭವ, ಸೀನಿಯಾರಿಟಿ ಎಂದು ಬೆನ್ನು ತಟ್ಟಿಕೊಳ್ಳುತ್ತೀರಾ? ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.

ಹೋಗಲಿ, ನೀವು ಮೀಟಿಂಗ್ ಮಾಡಿ ಎಂದು ಗೃಹ ಸಚಿವರು, ಸಿಎಂ ಅವರು ಹೇಳಿದ್ದರಾ? ಇಲ್ಲವಲ್ಲ. ಅದಕ್ಕೇ ನಾನು ಹೇಳಿದ್ದು; ಅವರೇನು ಹೆಬ್ಬೆಟ್ಟು ಗೃಹ ಮಂತ್ರಿಗಳಾ? ಅಥವಾ ರಬ್ಬರ್ ಸ್ಟ್ಯಾಂಪ್ ಗೃಹ ಮಂತ್ರಿಗಳಾ? ಎಂದು. ಒಬ್ಬ ಹಿರಿಯ ಮಂತ್ರಿಯ ಖಾತೆಯನ್ನು ನೀವು ಹೀಗೆ ಅಕ್ರಮವಾಗಿ ಒತ್ತುವರಿ ಮಾಡುವುದಕ್ಕೆ ಸಂವಿಧಾನದಲ್ಲಿ ವಿಶೇಷ ತಿದ್ದುಪಡಿ ಏನನ್ನಾದರೂ ಮಾಡಿಸಿದ್ದೀರ? ಎಂದು ಡಿಸಿಎಂ ಅವರಿಗೆ ಪ್ರಶ್ನಿಸಿದ್ದಾರೆ.

ನಿಮ್ಮದು ಭಾರೀ ಅನುಭವ, ಸಿಕ್ಕಾಪಟ್ಟೆ ಸೀನಿಯಾರಿಟಿ!! ಇಂಥ ಸಣ್ಣ ವಿಷಯ ನಿಮಗೇಕೆ ತಿಳಿಯಲಿಲ್ಲ ಮಿಸ್ಟರ್ ಡಿಕೆಶಿ ಅವರೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ ಕೇಂದ್ರ ಸಚಿವರು.

Share. Facebook Twitter LinkedIn WhatsApp Email

Related Posts

GOOD NEWS: ರಾಜ್ಯದ 108 ಆಂಬುಲೆನ್ಸ್ ಸಿಬ್ಬಂದಿಗಳಿಗೆ ಭರ್ಜರಿ ಸಿಹಿಸುದ್ದಿ: ಬೋನಸ್, ಪ್ರೋತ್ಸಾಹಧನಕ್ಕೆ ಸರ್ಕಾರ ಗ್ರೀನ್ ಸಿಗ್ನಲ್

16/02/2026 6:27 PM4 Mins Read

ಕಾರ್ಯನಿರ್ವಹಣಾ ವರದಿ ನಾಪತ್ತೆ ತನಿಖೆಗೆ ಸಮಿತಿ ರಚನೆ: ಕರ್ನಾಟಕ ಮಾಹಿತಿ ಆಯೋಗದ ಸೂಚನೆಗೆ ಸರ್ಕಾರದ ನಿರ್ಧಾರ

16/02/2026 6:08 PM2 Mins Read

ನಟಿ ರಚಿತಾ ರಾಮ್ ಕಾರು ಚಾಲಕನಿಂದ ಅಧಿಕಾರಿ ಮೇಲೆ ಹಲ್ಲೆ

16/02/2026 6:05 PM1 Min Read
Recent News

BREAKING : ಭಾರತ್ ಮಂಟಪದಲ್ಲಿ ‘ಇಂಡಿಯಾ AI ಇಂಪ್ಯಾಕ್ಟ್ ಎಕ್ಸ್ ಪೋ’ ಉದ್ಘಾಟಿಸಿದ ಪ್ರಧಾನಿ ಮೋದಿ

16/02/2026 6:58 PM

BREAKING : ಜೆಇಇ ಮುಖ್ಯ ಪರೀಕ್ಷೆ ಫಲಿತಾಂಶ ಬಿಡುಗಡೆ ; ರಿಸಲ್ಟ್ ನೋಡಲು ನೇರ ಲಿಂಕ್ ಇಲ್ಲಿದೆ! JEE Main results

16/02/2026 6:37 PM

GOOD NEWS: ರಾಜ್ಯದ 108 ಆಂಬುಲೆನ್ಸ್ ಸಿಬ್ಬಂದಿಗಳಿಗೆ ಭರ್ಜರಿ ಸಿಹಿಸುದ್ದಿ: ಬೋನಸ್, ಪ್ರೋತ್ಸಾಹಧನಕ್ಕೆ ಸರ್ಕಾರ ಗ್ರೀನ್ ಸಿಗ್ನಲ್

16/02/2026 6:27 PM

CBSE 10,12ನೇ ತರಗತಿ ಪರೀಕ್ಷೆಗಳಿಗೆ ಮುನ್ನ ನಕಲಿ ಸುದ್ದಿ, ವದಂತಿಗಳ ವಿರುದ್ಧ ಮಂಡಳಿ ಎಚ್ಚರಿಕೆ!

16/02/2026 6:21 PM
State News
KARNATAKA

GOOD NEWS: ರಾಜ್ಯದ 108 ಆಂಬುಲೆನ್ಸ್ ಸಿಬ್ಬಂದಿಗಳಿಗೆ ಭರ್ಜರಿ ಸಿಹಿಸುದ್ದಿ: ಬೋನಸ್, ಪ್ರೋತ್ಸಾಹಧನಕ್ಕೆ ಸರ್ಕಾರ ಗ್ರೀನ್ ಸಿಗ್ನಲ್

By kannadanewsnow0916/02/2026 6:27 PM KARNATAKA 4 Mins Read

ಬೆಂಗಳೂರು: ರಾಜ್ಯದ 108 ಆರೋಗ್ಯ ಕವಚ ಸೇವೆಯಡಿಯಲ್ಲಿ ನೇಮಕಗೊಳ್ಳಲಿರುವ ಇಎಂಟಿ ಮತ್ತು ಪೈಲೆಟ್ ಗಳಿಗೆ ಮೂಲ ವೇತನವನ್ನು ಚಾಲ್ತಿಯಲ್ಲಿರುವ ಕನಿಷ್ಠ…

ಕಾರ್ಯನಿರ್ವಹಣಾ ವರದಿ ನಾಪತ್ತೆ ತನಿಖೆಗೆ ಸಮಿತಿ ರಚನೆ: ಕರ್ನಾಟಕ ಮಾಹಿತಿ ಆಯೋಗದ ಸೂಚನೆಗೆ ಸರ್ಕಾರದ ನಿರ್ಧಾರ

16/02/2026 6:08 PM

ನಟಿ ರಚಿತಾ ರಾಮ್ ಕಾರು ಚಾಲಕನಿಂದ ಅಧಿಕಾರಿ ಮೇಲೆ ಹಲ್ಲೆ

16/02/2026 6:05 PM

BREAKING: ಸ್ಯಾಂಡಲ್ ವುಡ್ ಖ್ಯಾತ ಕಿರುತೆರೆ ನಟಿ ರಶ್ಮಿ ಲೀಲಾ ಇನ್ನಿಲ್ಲ | Actress Rashmi Leela No More

16/02/2026 5:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.