Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Swaasa : ನಿಮ್ಮ ಕೆಮ್ಮಿನ ಶಬ್ದ ಕೇಳಿ ಅಸ್ತಮಾ, ಟಿಬಿ ಕಾಯಿಲೆ ಪತ್ತೆಹಚ್ಚುತ್ತೆ ಈ `AI’ ತಂತ್ರಜ್ಞಾನ : ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಸಂಚಲನ !

19/03/2026 11:24 AM

ಷೇರು ಮಾರುಕಟ್ಟೆಯಲ್ಲಿ ಮಹಾ ಕುಸಿತ: ಸೆನ್ಸೆಕ್ಸ್ 1,700 ಪಾಯಿಂಟ್ಸ್ ಬಲಿ, ನಿಫ್ಟಿ 500 ಅಂಕ ಡೌನ್; ತೈಲ ಬೆಲೆ ಏರಿಕೆಗೆ ಹೂಡಿಕೆದಾರರು ಕಂಗಾಲು!

19/03/2026 11:20 AM

ALERT : ಬೀದಿ ನಾಯಿಗಳು ನಿಮ್ಮ ಮೇಲೆ ದಾಳಿ ಮಾಡಿದರೆ ಏನು ಮಾಡಬೇಕು? ಪ್ರಾಣ ಉಳಿಸಬಲ್ಲ 5 ಅತ್ಯಗತ್ಯ ಸಲಹೆಗಳು ಇಲ್ಲಿವೆ !

19/03/2026 11:12 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯಾದ್ಯಂತ ಏಕಕಾಲಕ್ಕೆ ಕಣ್ಣಿನ ಆರೈಕೆಗೆ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ
KARNATAKA

ರಾಜ್ಯಾದ್ಯಂತ ಏಕಕಾಲಕ್ಕೆ ಕಣ್ಣಿನ ಆರೈಕೆಗೆ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ

By kannadanewsnow0503/07/2025 4:33 PM

ಬೆಂಗಳೂರು : ಅಂಧ್ಯತ್ವ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಜಾರಿಗೆ ತಂದ ಆಶಾಕಿರಣ ಯೋಜನೆಯಡಿ ರಾಜ್ಯಾದ್ಯಂತ 393 ಶಾಶ್ವತ ದೃಷ್ಟಿ ಕೇಂದ್ರಗಳಿಗೆ ಇಂದು ಚಾಲನೆ ನೀಡಲಾಗಿದೆ. ಬೆಂಗಳೂರಿನ ಗೋವಿಂದರಾಜ ನಗರ ಕ್ಷೇತ್ರದ ಬಿಬಿಎಂಪಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಇಂದು ದೃಷ್ಟಿ ಕೇಂದ್ರ ಉದ್ಘಾಟಿಸಿದ ಡಿಸಿಎಂ ಡಿ.ಕೆ ಶಿವಕುಮಾರ್, ರಾಜ್ಯದ 393 ಆಶಾಕಿರಣ ದೃಷ್ಟಿ ಕೇಂದ್ರಗಳಿಗೆ ಏಕಕಾಲಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಶಾಕಿರಣ ಯೋಜನೆಯನ್ನು ಮರುವಿನ್ಯಾಸಗೊಳಿಸಿದ್ದು, ನಿರಂತರವಾಗಿ ಕಣ್ಣಿನ ಆರೋಗ್ಯ ಸೇವೆ ಒದಗಿಸುವತ್ತ 393 ಶಾಶ್ವತ ಆಶಾಕಿರಣ ದೃಷ್ಟಿ ಕೇಂದ್ರಗಳನ್ನ ತೆರೆಯಲಾಗಿದೆ. ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳು, ತಾಲೂಕು ಆಸ್ಪತ್ರೆ ಸೇರಿದಂತೆ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ದೃಷ್ಟಿ ಕೇಂದ್ರಗಳನ್ನು ತೆರೆಯಲಾಗಿದ್ದು, ದೃಷ್ಟಿದೋಷ ಹೊಂದಿದವರು ತಪಾಸಣೆ ಮಾಡಿಸಿಕೊಂಡು, ಉಚಿತವಾಗಿ ಕನ್ನಡಕಗಳನ್ನ ಪಡೆಯಬಹುದಾಗಿದೆ. ಅಲ್ಲದೇ ಕಣ್ಣಿನ ಪೊರೆ ಶಸ್ತ್ರಚುಕಿತ್ಸೆಯನ್ನ ಉಚಿತವಾಗಿ ಕಲ್ಪಿಸಲಾಗುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಕಣ್ಣಿನ ಆರೈಕೆಗೆ ರಾಜ್ಯ ಸರ್ಕಾರ ಜಾರಿಗೆ ತಂದ ಆಶಾಕಿರಣ ಒಂದು ಮಾದರಿ ಯೋಜನೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಶ್ಲಾಘನೆ ವ್ಯಕ್ತಪಡಿಸಿದೆ. ಯೋಜನೆಯನ್ನ ಅಧ್ಯಯನ ಮಾಡಲು ವಿಶ್ವ ಆರೋಗ್ಯ ಸಂಸ್ಥೆ ಕರ್ನಾಟಕಕ್ಕೆ ತಂಡ ಕಳುಸುತ್ತಿರುವುದು ಅತ್ಯಂತ ಹೆಮ್ಮೆಯ ಸಂಗತಿ. ಬೆಂಗಳೂರಿಗೆ ಪ್ರತ್ಯೇಕ ಆರೋಗ್ಯ ನೀತಿಯ ಅಗತ್ಯತೆ ಇದೆ. ಈ ನಿಟ್ಟಿನಲ್ಲಿ ತಜ್ಞರ ತಂಡ ವರದಿ ಸಿದ್ಧಪಡಿಸುತ್ತಿದ್ದು, ಬೆಂಗಳೂರಿಗೆ ಪ್ರತ್ಯೇಕ ಆರೋಗ್ಯ ನೀತಿಯನ್ನು ಶೀಘ್ರದಲ್ಲಿಯೇ ಜಾರಿಗೆ ತರುವುದಾಗಿ ಇದೇ ವೇಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ನೂತನ ದೃಷ್ಟಿ ಕೇಂದ್ರಗಳಿಗೆ ಚಾಲನೆ ನೀಡಿ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ಆಶಾಕಿರಣ ಯೋಜನೆ ನಮ್ಮ ಸರ್ಕಾರದ ದೃಷ್ಟಿ ಗ್ಯಾರಂಟಿ ಯೋಜನೆ ಎಂದು ವಿಶ್ಲೇಷಿಸಿದರು. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಆರೋಗ್ಯ ಇಲಾಖೆಯಲ್ಲಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಕಣ್ಣಿನ ಆರೈಕೆಯಲ್ಲಿ ಇಂದು ಶಾಶ್ವತ ದೃಷ್ಟಿ ಕೇಂದ್ರಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ತೆರೆಯಲಾಗಿದೆ. ನಾನು ಕೂಡ ಇಂದು ದೃಷ್ಟಿ ಕೇಂದ್ರದಲ್ಲಿ ಕಣ್ಣಿನ ತಪಾಸಣೆ ನಡೆಸಿಕೊಂಡಿದ್ದೇನೆ. ಉತ್ತಮ ವ್ಯವಸ್ಥೆ ಕಲ್ಪಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆಯುವಂತೆ ಡಿಸಿಎಂ ಡಿಕೆ ಶಿವಕುಮಾರ್ ರಾಜ್ಯದ ಜನರಿಗೆ ಕರೆ ನೀಡಿದರು.‌

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ (ಬಿಬಿಎಂಪಿ) 11 ಆಶಾಕಿರಣ ದೃಷ್ಟಿ ಕೇಂದ್ರಗಳಲ್ಲಿ 5 ಕೇಂದ್ರಗಳು Sight Savers India ರವರ ಸಿಎಸ್‌ಆರ್ ಸಹಭಾಗಿತ್ವದಲ್ಲಿ ಮಾನವ ಸಂಪನ್ಮೂಲ, ಉಪಕರಣಗಳು ಹಾಗೂ ಕನ್ನಡಕಗ ವಿತರಣೆಗಳ ಸೇವೆಗಳನ್ನು ಒದಗಿಸಲು ವ್ಯವಸ್ಥೆ ಮಾಡಲಾಗಿದೆ. OneSight Essilor Luxottica Foundation ಸೇರಿದಂತೆ ಒಟ್ಟು 13 ಅಶಾಕಿರಣ ದೃಷ್ಟಿ ಕೇಂದ್ರಗಳು ವಿವಿಧ ಸಿಎಸ್‌ಆರ್ ಪಾಲುದಾರರ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗಿದೆ.

ಆಶಾಕಿರಣ ಕಾರ್ಯಕ್ರಮದ ಎರಡು ಹಂತಗಳಲ್ಲಿ 8 ಜಿಲ್ಲೆಗಳಲ್ಲಿ ಒಟ್ಟು 1.40 ಕೋಟಿ ಜನರು ಪ್ರಾಥಮಿಕ ನೇತ್ರ ತಪಾಸಣೆ ಒಳಗಾಗಿದ್ದು, ಇವರಲ್ಲಿ 24.50 ಲಕ್ಷ ಜನರಿಗೆ ಹೆಚ್ಚಿನ ನೇತ್ರ ತಪಾಸಣೆಗೆ ಸಂಬಂಧಿಸಿದಂತೆ ತೊಂದರೆಗಳಿರುವುದು ಪತ್ತೆಯಾಗಿ, ಇವರನ್ನು ದ್ವಿತೀಯ ಹಂತದ ನೇತ್ರ ತಪಾಸಣೆಗೆ ಒಳಪಡಿಸಲಾಗಿರುತ್ತದೆ. 4.3 ಲಕ್ಷ ಜನರಿಗೆ ಉಚಿತ ಕನ್ನಡಕ ವಿತರಿಸಲಾಗಿದ್ದು ಉಳಿದ ಕನ್ನಡಕಗಳನ್ನು ಆಶಾಕಿರಣ ದೃಷ್ಟಿ ಕೇಂದ್ರಗಳಲ್ಲಿ ಇರಿಸಲಾಗಿದೆ. ಹಾಗು ಒಟ್ಟು 1.05 ಲಕ್ಷ ಜನರಿಗೆ ಉಚಿತ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ..

Share. Facebook Twitter LinkedIn WhatsApp Email

Related Posts

Swaasa : ನಿಮ್ಮ ಕೆಮ್ಮಿನ ಶಬ್ದ ಕೇಳಿ ಅಸ್ತಮಾ, ಟಿಬಿ ಕಾಯಿಲೆ ಪತ್ತೆಹಚ್ಚುತ್ತೆ ಈ `AI’ ತಂತ್ರಜ್ಞಾನ : ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಸಂಚಲನ !

19/03/2026 11:24 AM1 Min Read

ALERT : ಬೀದಿ ನಾಯಿಗಳು ನಿಮ್ಮ ಮೇಲೆ ದಾಳಿ ಮಾಡಿದರೆ ಏನು ಮಾಡಬೇಕು? ಪ್ರಾಣ ಉಳಿಸಬಲ್ಲ 5 ಅತ್ಯಗತ್ಯ ಸಲಹೆಗಳು ಇಲ್ಲಿವೆ !

19/03/2026 11:12 AM2 Mins Read

BREAKING : ಭಾರತ ದೇಶದ ದೊಡ್ಡ ನಾಯಕರ ಹತ್ಯೆ, 3ನೇ ಮಹಾಯುದ್ಧ ಸಾಧ್ಯತೆ : ಸಂತ ಬಾಳು ಮಾಮಾರ ಸ್ಪೋಟಕ ಭವಿಷ್ಯ!

19/03/2026 11:10 AM1 Min Read
Recent News

Swaasa : ನಿಮ್ಮ ಕೆಮ್ಮಿನ ಶಬ್ದ ಕೇಳಿ ಅಸ್ತಮಾ, ಟಿಬಿ ಕಾಯಿಲೆ ಪತ್ತೆಹಚ್ಚುತ್ತೆ ಈ `AI’ ತಂತ್ರಜ್ಞಾನ : ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಸಂಚಲನ !

19/03/2026 11:24 AM

ಷೇರು ಮಾರುಕಟ್ಟೆಯಲ್ಲಿ ಮಹಾ ಕುಸಿತ: ಸೆನ್ಸೆಕ್ಸ್ 1,700 ಪಾಯಿಂಟ್ಸ್ ಬಲಿ, ನಿಫ್ಟಿ 500 ಅಂಕ ಡೌನ್; ತೈಲ ಬೆಲೆ ಏರಿಕೆಗೆ ಹೂಡಿಕೆದಾರರು ಕಂಗಾಲು!

19/03/2026 11:20 AM

ALERT : ಬೀದಿ ನಾಯಿಗಳು ನಿಮ್ಮ ಮೇಲೆ ದಾಳಿ ಮಾಡಿದರೆ ಏನು ಮಾಡಬೇಕು? ಪ್ರಾಣ ಉಳಿಸಬಲ್ಲ 5 ಅತ್ಯಗತ್ಯ ಸಲಹೆಗಳು ಇಲ್ಲಿವೆ !

19/03/2026 11:12 AM

BREAKING : ಭಾರತ ದೇಶದ ದೊಡ್ಡ ನಾಯಕರ ಹತ್ಯೆ, 3ನೇ ಮಹಾಯುದ್ಧ ಸಾಧ್ಯತೆ : ಸಂತ ಬಾಳು ಮಾಮಾರ ಸ್ಪೋಟಕ ಭವಿಷ್ಯ!

19/03/2026 11:10 AM
State News
KARNATAKA

Swaasa : ನಿಮ್ಮ ಕೆಮ್ಮಿನ ಶಬ್ದ ಕೇಳಿ ಅಸ್ತಮಾ, ಟಿಬಿ ಕಾಯಿಲೆ ಪತ್ತೆಹಚ್ಚುತ್ತೆ ಈ `AI’ ತಂತ್ರಜ್ಞಾನ : ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಸಂಚಲನ !

By kannadanewsnow5719/03/2026 11:24 AM KARNATAKA 1 Min Read

ಸಾಮಾನ್ಯವಾಗಿ ಉಸಿರಾಟದ ಸಮಸ್ಯೆ ಅಥವಾ ಶ್ವಾಸಕೋಶದ ಕಾಯಿಲೆಗಳನ್ನು ಪತ್ತೆಹಚ್ಚಲು ಎಕ್ಸ್-ರೇ, ಸ್ಪಿರೋಮೆಟ್ರಿಯಂತಹ ದುಬಾರಿ ಪರೀಕ್ಷೆಗಳ ಅಗತ್ಯವಿರುತ್ತದೆ. ಆದರೆ, ಹೈದರಾಬಾದ್ ಮೂಲದ…

ALERT : ಬೀದಿ ನಾಯಿಗಳು ನಿಮ್ಮ ಮೇಲೆ ದಾಳಿ ಮಾಡಿದರೆ ಏನು ಮಾಡಬೇಕು? ಪ್ರಾಣ ಉಳಿಸಬಲ್ಲ 5 ಅತ್ಯಗತ್ಯ ಸಲಹೆಗಳು ಇಲ್ಲಿವೆ !

19/03/2026 11:12 AM

BREAKING : ಭಾರತ ದೇಶದ ದೊಡ್ಡ ನಾಯಕರ ಹತ್ಯೆ, 3ನೇ ಮಹಾಯುದ್ಧ ಸಾಧ್ಯತೆ : ಸಂತ ಬಾಳು ಮಾಮಾರ ಸ್ಪೋಟಕ ಭವಿಷ್ಯ!

19/03/2026 11:10 AM

ಕರಾವಳಿ ಭಾಗದಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ : ಹಿಂದೂ ವಿದ್ಯಾರ್ಥಿನಿಯರ ಜೊತೆಗೆ ಜಾತ್ರೆಗೆ ಬಂದ ಮುಸ್ಲಿಂ ಬಾಲಕನ ಮೇಲೆ ಹಲ್ಲೆ!

19/03/2026 10:45 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.