ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ. ಈ ಹೊತ್ತಿನಲ್ಲೇ ಸಚಿವ ಕೆ.ಜೆ ಜಾರ್ಜ್ ಅವರನ್ನು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿಯಾಗಿರುವುದು ತೀವ್ರ ಕುತೂಹಲ ಮೂಡಿಸಿದೆ. ಅಲ್ಲದೇ ನಾಯಕತ್ವ ಬದಲಾವಣೆ ಸಂಬಂಧ ರಹಸ್ಯ ಮಾತುಕತೆ ನಡೆಸಲು ಭೇಟಿಯಾಗಿದ್ದಾರೆ ಎನ್ನಲಾಗುತ್ತಿದೆ.
ಬೆಂಗಳೂರಿನ ರೇಸ್ ಕೋರ್ಸ್ ಬಳಿಯಲ್ಲಿರುವಂತ ಇಂಧನ ಸಚಿವ ಕೆಜೆ ಜಾರ್ಜ್ ನಿವಾಸಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿಯಾಗಿ, ಮಾತುಕತೆ ನಡೆಸಿದರು. ಈ ಭೇಟಿಯು ನಾಯಕತ್ವ ಬದಲಾವಣೆ ಸಂಬಂಧದ ರಹಸ್ಯ ಮಾತುಕತೆ ಎನ್ನಲಾಗುತ್ತಿದೆ. ಈಗಾಗಲೇ ಸಿಎಂ ಸಿದ್ಧರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಚಿವ ಕೆಜೆ ಜಾರ್ಜ್ ಭೇಟಿಯಾಗಿ ಬಂದಿದ್ದರು.
ಈ ಬೆನ್ನಲ್ಲೇ ಸಚಿವ ಕೆಜೆ ಜಾರ್ಜ್ ಅವರ ನಿವಾಸಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿಯಾಗಿರೋದು ತೀವ್ರ ಕುತೂಹಲ ಮೂಡಿಸಿದೆ. ಕಾಂಗ್ರೆಸ್ ವರಿಷ್ಠರ ಜೊತೆಗೆ ಇಂಧನ ಸಚಿವ ಕೆ.ಜೆ ಜಾರ್ಜ್ ಉತ್ತಮ ಸಂಬಂಧ ಹೊಂದಿದ್ದಾರೆ. ಹೀಗೆ ಕಾಂಗ್ರೆಸ್ ಹೈಕಮಾಂಡ್ ಜೊತೆಗೆ ಆತ್ಮೀಯತೆ ಹೊಂದಿರುವ ಕೆಜೆ ಜಾರ್ಜ್ ಅವರನ್ನು ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿಯಾಗಿದ್ದು ಯಾಕೆ ಎನ್ನುವ ಚರ್ಚೆ ಕೂಡ ಎದ್ದಿದೆ. ಆ ಬಗ್ಗೆ ಕಾದು ನೋಡಬೇಕಿದೆ.
ಗಡಿ ಬದಲಾಗಬಹುದು, ಸಿಂಧ್ ಭಾರತಕ್ಕೆ ಮರಳಬಹುದು: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್








