ಬೆಂಗಳೂರು : ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣನವರ್ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮೇಲಿನ ಅಭಿಮಾನ ಪ್ರದರ್ಶಿಸಿದ್ದು. ತಮ್ಮ ಪುತ್ರನಿಗೆ ‘ಶಿವಕುಮಾರ್’ ಎಂದು ಡಿ.ಕೆ. ಶಿವಕುಮಾರ್ ಅವರ ಮೂಲಕವೇ ನಾಮಕರಣ ಮಾಡಿಸಿದ್ದಾರೆ.
ಈ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್ ಟ್ವೀಟ್ ಮಾಡಿದ್ದು, ಇದು ಭಾಗ್ಯ, ಇದು ಭಾಗ್ಯ, ಇದು ಭಾಗ್ಯವಯ್ಯ!ನನ್ನ ಗೃಹಕಚೇರಿಯಲ್ಲಿಂದು ಕುಡಚಿ ಶಾಸಕರಾದ ಮಹೇಂದ್ರ ತಮ್ಮಣ್ಣನವರ್ ಅವರ ಮಗನಿಗೆ “ಶಿವಕುಮಾರ್” ಎಂದು ನಾಮಕರಣ ಮಾಡುವ ಭಾಗ್ಯ ನನ್ನದಾಯಿತು. ನನ್ನ ಹೆಸರನ್ನು ಮಗುವಿಗೆ ಇಡಲು ನಿರ್ಧರಿಸಿದ ಶಾಸಕರ ಈ ನಡೆಗೆ ನಾನು ಧನ್ಯ ಎಂದು ಹೇಳಿದ್ದಾರೆ.
ಮುಂದಿನ ದಿನಗಳಲ್ಲಿ ಈ ಮುದ್ದಾದ ಮಗು ನನಗಿಂತಲೂ ಎತ್ತರಕ್ಕೆ ಬೆಳೆಯಲಿ, ತಂದೆ-ತಾಯಿಗಳಿಗೆ ಒಳ್ಳೆಯ ಹೆಸರು ತರುವಂತಾಗಲಿ ಎಂದು ಶುಭಹಾರೈಸಿದೆ. ಕನ್ನಡ ರಾಜ್ಯೋತ್ಸವದ ಶುಭ ಸಂದರ್ಭದಲ್ಲಿ, ಈ “ಶಿವಕುಮಾರ” ಕರುನಾಡ ಬೆಳಗುವ ಕುವರನಾಗಲಿ ಎಂದು ಮನತುಂಬಿ ಹಾರೈಸಿದ್ದಾರೆ.
ಇದು ಭಾಗ್ಯ, ಇದು ಭಾಗ್ಯ, ಇದು ಭಾಗ್ಯವಯ್ಯ!
ನನ್ನ ಗೃಹಕಚೇರಿಯಲ್ಲಿಂದು ಕುಡಚಿ ಶಾಸಕರಾದ ಮಹೇಂದ್ರ ತಮ್ಮಣ್ಣನವರ್ ಅವರ ಮಗನಿಗೆ "ಶಿವಕುಮಾರ್" ಎಂದು ನಾಮಕರಣ ಮಾಡುವ ಭಾಗ್ಯ ನನ್ನದಾಯಿತು. ನನ್ನ ಹೆಸರನ್ನು ಮಗುವಿಗೆ ಇಡಲು ನಿರ್ಧರಿಸಿದ ಶಾಸಕರ ಈ ನಡೆಗೆ ನಾನು ಧನ್ಯ!
ಮುಂದಿನ ದಿನಗಳಲ್ಲಿ ಈ ಮುದ್ದಾದ ಮಗು ನನಗಿಂತಲೂ ಎತ್ತರಕ್ಕೆ ಬೆಳೆಯಲಿ,… pic.twitter.com/vCshPwiugG
— DK Shivakumar (@DKShivakumar) October 31, 2025








