ಬೆಳಗಾವಿ : ಸಿಎಂ ಮತ್ತು ಡಿಸಿಎಂ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಅಂತ ಹೇಳಿದ್ದಾರೆ. ಆದರೆ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಈ ಸಂದರ್ಭದಲ್ಲಿ ಅವಶ್ಯಕತೆ ಇರಲಿಲ್ಲ ಎಂದು ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿಕೆ ನೀಡಿದ್ದಾರೆ. ನಾವೆಲ್ಲರೂ ಆಶಾಭಾವನೆಯಲ್ಲಿದ್ದೇವೆ. ಹೈಕಮಾಂಡ್ ಸಂದೇಶಕ್ಕೆ ನಾವು ಕಾಯಬೇಕಾಗಿದೆ. ಡಿಕೆ ಶಿವಕುಮಾರ್ ನಿಷ್ಠಾವಂತ ಕಾರ್ಯಕರ್ತರಾಗಿ ಕೆಲಸ ಮಾಡಿದ್ದಾರೆ ಎಂದರು.
ಸಿಎಂ ಸಿದ್ದರಾಮಯ್ಯ 5 ವರ್ಷ ಸಿಎಂ ಎಂದು ಯತೀಂದ್ರ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು ಹೈಕಮಾಂಡ್ ನಿರ್ಧಾರಕ್ಕೆ ಬಂದ ಎಂದು ಈಗಾಗಲೇ ಸಿಎಂ ಸಿದ್ದರಾಮಯ್ಯ ಡಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಹೀಗಾಗಿ ನಿನ್ನೆ ಯತೀಂದ್ರ ಆ ಹೇಳಿಕೆ ಕೊಡುವ ಅವಶ್ಯಕತೆ ಇರಲಿಲ್ಲ ಹೈಕಮಾಂಡ್ ಸಂದೇಶಕ್ಕೆ ನಾವು ಕಾಯಬೇಕು ಡಿಕೆ ಶಿವಕುಮಾರ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಕೆಲಸ ಮಾಡಿದ್ದಾರೆ. ಡಿಕೆ ಶಿವಕುಮಾರ್ ಆಗಬೇಕೆಂದು ಹೇಳಿಕೊಂಡಿಲ್ಲ ಹೈಕಮಾಂಡ್ ತ್ಯಾಗ ಮಾಡಬೇಕು ಎಂದರೆ ಅದಕ್ಕೋಸ್ಕರ ಬದಲಾವಣೆ ಬಯಸಿದರೆ ಆ ನಿರ್ಧಾರಕ್ಕೆ ಎಲ್ಲರೂ ಬದ್ಧ ಎಂದು ಹೇಳಿದ್ದಾರೆ ಎಂದು ಎಂಎಲ್ಸಿ ಚನ್ನರಾಜ ಹಟ್ಟಿಹೋಳಿ ಹೇಳಿಕೆ ನೀಡಿದರು.








