ಬೆಂಗಳೂರು: ವಿಧಾನಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಆರ್ ಎಸ್ ಎಸ್ ಗೀತೆಯನ್ನು ಹೇಳಬಾರದಿತ್ತು ಎಂಬುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ವಿಧಾನಸಭೆಯಲ್ಲಿ ಆರ್ ಎಸ್ ಎಸ್ ಗೀತೆ ಹೇಳಿದ್ದಕ್ಕೆ ಡಿ.ಕೆ ಶಿವಕುಮಾರ್ ಕ್ಷಮೆಯಾಚಿಸಿದ್ದಾರೆ. ಡಿಕೆ ಶಿವಕುಮಾರ್ ಕ್ಷಮೆಯಾಚಿಸಿದ್ದಾರೆ. ಅಲ್ಲಿಗೆ ಎಲ್ಲ ಮುಗೀತು ಎಂದರು.
ಪದೇ ಪದೇ ಡಿ.ಕೆ ಶಿವಕುಮಾರ್ ಸದನದಲ್ಲಿ ಆರ್ ಎಸ್ ಎಸ್ ಗೀತೆ ಹೇಳಿದ್ದನ್ನು ಎತ್ತಿಹಿಡಿಯುವುದು ಬೇಡ. ಕ್ಲೋಸ್ ಆದ ಕೇಸ್ ಓಪನ್ ಮಾಡುವುದಕ್ಕೆ ನಾನು ಹೋಗೋದಿಲ್ಲ. ಇನ್ಮುಂದೆ ಯಾರೂ ಹೀಗೆ ಮಾಡಬಾರದು ಎಂಬುದಾಗಿ ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ ನೀಡಿದರು.
ಚಾಮುಂಡೇಶ್ವರಿ ನಮ್ಮ ನಾಡಿನ ಅಧಿದೇವತೆ, ಆಕೆಯ ದರ್ಶನ ಎಲ್ಲರ ಹಕ್ಕು: ಡಿಕೆಶಿ ಸ್ಪಷ್ಟನೆ
ರಾಜ್ಯದ ರೈತರಿಗೆ ಗುಡ್ ನ್ಯೂಸ್: ಸೆ.1ರಿಂದ ಪಹಣಿ ತಿದ್ದುಪಡಿ ವಿಶೇಷ ಅಭಿಯಾನ