ಹಾಸನ : ಉಪ ಮುಖ್ಯಮಂತ್ರಿ ಅಡಿಕೆ ಶಿವಕುಮಾರ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು ಮೂರು ದಿನಗಳ ಕಾಲ ವಿಶ್ರಾಂತಿ ಅಲ್ಲಿ ಇದ್ದಾರೆ ಎಂದು ಹೇಳಲಾಗಿತ್ತು ಆದರೆ ಇದೀಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಸನದ ನಾಗರ ನವಿಲೇ ದೇಗುಲಕ್ಕೆ ಗುಟ್ಟಾಗಿ ಭೇಟಿ ನೀಡಿದ್ದು ಮುನ್ನ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿರುವುದು ತೀವ್ರ ಕುತೂಹಲ ಕೆರಳಿಸಿದೆ.
ಹೌದು ಹಾಸನದ ನಾಗರ ನವಿಲೇ ದೇವಸ್ಥಾನಕ್ಕೆ ಉಪಮುಖ್ಯಮಂತ್ರಿಯ ಡಿಕೆ ಶಿವಕುಮಾರ್ ಭೇಟಿ ನೀಡಿದ್ದಾರೆ. ಪೊಲೀಸ್ ಭದ್ರತೆ ಬೆಂಗಾವಲು ಪಡೆಯಿಲ್ಲದೆ ಭೇಟಿ ನೀಡಿದ್ದು ದೆಹಲಿಗೆ ತೆರಳುವ ಮುನ್ನವೇ ದೇಗುಲದಲ್ಲಿ ಡಿಕೆ ಶಿವಕುಮಾರ್ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಎರಡು ದಿನಗಳ ಕಾಲ ವಿಶ್ರಾಂತಿ ಎಂದಿದ್ದರು. ಆದರೆ ಈಗ ಗುಟ್ಟಾಗಿ. ತೆರಳಿ ಏಕಾಂಗಿಯಾಗಿ ಡಿಕೆ ಶಿವಕುಮಾರ್ ಪೂಜೆ ಸಲ್ಲಿಸಿದ್ದಾರೆ. ಹಾಸನದ ನಾಗರನವಿಲೆ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.