ಬೆಂಗಳೂರು:ಸರ್ಕಾರದಲ್ಲಿ ಹೆಚ್ಚುವರಿ ಉಪ ಮುಖ್ಯಮಂತ್ರಿ ಹುದ್ದೆಗಳಿಗೆ ಹೈಕಮಾಂಡ್ ನಾಯಕರೇ ಉತ್ತರ ನೀಡುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಗುಪ್ತ ಸಭೆ ನಡೆದಿದ್ದು ಹೆಚ್ಚುವರಿ ಡಿಸಿಎಂ ಹುದ್ದೆಗೆ ಪಟ್ಟು ಹಿಡಿದ ಬಗ್ಗೆ ಅವರು ಮಾತನಾಡಿದರು. ಡಿಸಿಎಂ ಹುದ್ದೆ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ನಾವಲ್ಲ.ಈಗ ಏನಿದ್ದರೂ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಬೇಕು.ಅದಕ್ಕಾಗಿ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಅವರು ಹೇಳಿದರು.
ಇತ್ತೀಚೆಗೆ ಸತೀಶ್ ಜಾರಕಿಹೊಳಿ ದೆಹಲಿಗೆ ಭೇಟಿ ನೀಡಿದ್ದು ಡಿಸಿಎಂ ಹುದ್ದೆಗೆ ಪಟ್ಟು ಹಿಡಿದಿದ್ದರು.ಡಿಸಿಎಂ ಹುದ್ದೆಗಳು ದಲಿತ ನಾಯಕರಿಗೂ ಕೊಟ್ಟರೆ ಲೋಕಸಭಾ ಚುನಾವಣೆಯಲ್ಲಿ ಸುಲಭವಾಗಿ ಗೆಲ್ಲಬಹುದು ಎಂಬುದು ಎಂದು ಹೇಳಿದ್ದರು.