ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ನಾಳೆಯೂ ಮಳೆ ಮುಂದುವರೆಯುವ ಮುನ್ಸೂಚನೆಯಿದೆ. ಹೀಗಾಗಿ ಸಾಗರ ತಾಲ್ಲೂಕಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿಲ್ಲ ಅಂತ ಸಾಗರ ಡಿಡಿಪಿಐ ಹೆಚ್.ಕೆ ಪಾಂಡು ಅವರು ಸ್ಪಷ್ಟ ಪಡಿಸಿದ್ದಾರೆ.
ಈ ಕುರಿತಂತೆ ನಿಮ್ಮ ಕನ್ನಡ ನ್ಯೂಸ್ ನೌ ಜೊತೆಗೆ ಮಾತನಾಡಿದಂತ ಅವರು ನಾಳೆ ಸಾಗರ ತಾಲ್ಲೂಕಿನಲ್ಲಿ ಭಾರೀ ಮಳೆಯಾಗುವಂತ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಶಾಲಾ ಮಕ್ಕಳ ಸುರಕ್ಷತೆಯ ದೃಷ್ಠಿಯಿಂದ ನಾಳೆ ಅಂಗನವಾಡಿ ಕೇಂದ್ರ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ ಅಂತ ತಿಳಿಸಿದರು.
ಇನ್ನೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಡಿಡಿಪಿಐ ಅವರನ್ನು ಕಾಲೇಜುಗಳಿಗೂ ರಜೆ ಘೋಷಣೆ ಮಾಡಲಾಗಿದ್ಯಾ ಅನ್ನೋ ಬಗ್ಗೆ ವಿಚಾರಿಸಿದಾಗ, ಮಳೆಯ ಪ್ರಮಾಣವನ್ನು ಆಧರಿಸಿ ಆಯಾ ಕಾಲೇಜುಗಳ ಪ್ರಾಂಶುಪಾಲರು ರಜೆಯನ್ನು ಘೋಷಿಸುವ ನಿರ್ಧಾರ ಕೈಗೊಳ್ಳಲು ಸೂಚಿಸಲಾಗಿದೆ. ಹೆಚ್ಚು ಮಳೆಯಾದ್ರೇ ಆಯಾ ಕಾಲೇಜುಗಳ ಪ್ರಾಂಶುಪಾಲರು ರಜೆಯನ್ನು ಘೋಷಣೆ ಮಾಡಲಿದ್ದಾರೆ. ಅದರ ಹೊರತಾಗಿ ನಾಳೆ ಸಾಗರ ತಾಲ್ಲೂಕಿನ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಿಲ್ಲ ಅಂತ ಸ್ಪಷ್ಟ ಪಡಿಸಿದ್ದಾರೆ.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
ಶಿವಮೊಗ್ಗ: ಜು.16ರ ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
HD ಕುಮಾರಸ್ವಾಮಿ ಸರ್ವಪಕ್ಷ ಸಭೆಗೆ ಬರದೇ ‘ಬಾಡೂಟಕ್ಕೆ’ ಹೋಗಿದ್ದು ದುರಂತ : ಸಚಿವ ಚೆಲುವರಾಯಸ್ವಾಮಿ