ವಯಾನಾಡ್ : ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶಗಳಲ್ಲಿ ಮಂಗಳವಾರ ಬೆಳಿಗ್ಗೆ ಭಾರಿ ಮಳೆಯ ನಡುವೆ ಸಂಭವಿಸಿದ ಭೂಕುಸಿತದಲ್ಲಿ ಕನಿಷ್ಠ 84 ಜನರು ಸಾವನ್ನಪ್ಪಿದ್ದಾರೆ, 116 ಜನರು ಗಾಯಗೊಂಡಿದ್ದಾರೆ ಮತ್ತು ನೂರಾರು ಜನರು ಸಿಕ್ಕಿಬಿದ್ದಿದ್ದಾರೆ ಎಂದು ಕೇರಳ ಸರ್ಕಾರ ಮಾಹಿತಿ ನೀಡಿದೆ.
ಕಲ್ಲುಗಳು ಮತ್ತು ಮಣ್ಣಿನ ಗುಂಡಿಗಳ ಅಡಿಯಲ್ಲಿ ಹಲವಾರು ಜನರು ಸಿಕ್ಕಿಬಿದ್ದಿದ್ದಾರೆ ಎಂದು ವರದಿಯಾಗಿದ್ದು, ಮುಂಡಕ್ಕೈ, ಚುರಲ್ಮಾಲಾ, ಅತ್ತಮಾಲಾ ಮತ್ತು ನುಲುಪ್ಪುಳ ಗ್ರಾಮಗಳಲ್ಲಿ ಭೂಕುಸಿತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೇರಳದಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ. ಈವರೆಗೆ ಸುಮಾರು 101 ಜನರನ್ನು ರಕ್ಷಿಸಲಾಗಿದೆ ಎಂದು ಸಚಿವರು ಹೇಳಿದರು.
#WATCH | Thiruvananthapuram | On heavy rains and landslide in Wayanad, Kerala Minister Veena George says, "We are trying every possible thing to rescue our people. We have received 24 bodies in different hospitals. Around 70 people are also injured. We have ensured proper… pic.twitter.com/T0wcRW7y1q
— ANI (@ANI) July 30, 2024
ಮಂಗಳವಾರ ಮುಂಜಾನೆ 2 ರಿಂದ 3 ಗಂಟೆಯ ನಡುವೆ ಈ ಘಟನೆ ನಡೆದಿದೆ ಎಂದು ವೀಣಾ ಜಾರ್ಜ್ ತಿಳಿಸಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ಸಹಾಯಕ ಸಿಬ್ಬಂದಿ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ ಎಷ್ಟು ಜನರು ಸಿಕ್ಕಿಬಿದ್ದಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ ಎಂದು ಕೇರಳ ಅರಣ್ಯ ಸಚಿವ ಶಶೀಂದ್ರನ್ ತಿಳಿಸಿದ್ದಾರೆ.
ಅಪಘಾತದ ಸ್ಥಳಕ್ಕೆ ಹೋಗುವ ಮಾರ್ಗಗಳಲ್ಲಿನ ಸೇತುವೆಯೂ ಭೂಕುಸಿತಕ್ಕೆ ಒಳಗಾಗಿರುವುದರಿಂದ ರಕ್ಷಣಾ ಕಾರ್ಯಾಚರಣೆ ವಿಳಂಬವಾಗುತ್ತಿದೆ ಎಂದು ಶಶೀಂದ್ರನ್ ಹೇಳಿದರು.