ಬೆಂಗಳೂರು: ಕರ್ನಾಟಕ ವಿದ್ಯುತ್ ನಿಗಮದಲ್ಲಿ ಖಾಲಿ ಇರುವ ಸಹಾಯಕ ಎಂಜಿನಿಯರ್, ಕಿರಿಯ ಎಂಜಿನಿಯರ್ ಸೇರಿದಂತೆ ಇತರ ಹುದ್ದೆಗಳಿಗೆ ನಡೆಸಲಾಗಿದ್ದ ಪರೀಕ್ಷೆಯನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮರು ಪರೀಕ್ಷೆಗೆ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಈ ಹಿಂದೆ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳಿಗೆ ಡಿಸೆಂಬರ್ 27 ಮತ್ತು 28ರಂದು ಮರು ಪರೀಕ್ಷೆ ನಡೆಸಲಾಗುತ್ತದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಅಭ್ಯರ್ಥಿಗಳು ವೆಬ್ ಸೈಟ್ ನಲ್ಲಿ ಬಿಟ್ಟಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಯಾವ ಹುದ್ದೆಗೆ ಅರ್ಜಿ ಸಲ್ಲಿಸಲಾಗಿತ್ತು ಇತ್ಯಾದಿ ಮಾಹಿತಿಯನ್ನು ನಮೂದಿಸಬೇಕು. ಹೆಚ್ಚಿನ ವಿವರಗಳಿಗೆ ಪ್ರಾಧಿಕಾರದ ವೆಬ್ ಸೈಟ್ ನೋಡಬೇಕು ಎಂದು ಅವರು ಸಲಹೆ ನೀಡಿದ್ದಾರೆ.
BREAKING: ‘ಹಾವು ಕಡಿತ’ಕ್ಕೆ ಒಳಗಾದವರ ಚಿಕಿತ್ಸೆಗೆ ‘ದರ ನಿಗದಿ’ ಪಡಿಸಿ ‘ರಾಜ್ಯ ಸರ್ಕಾರ’ ಆದೇಶ
ALERT : ತೊಳೆಯದ `ತಲೆದಿಂಬು’ ಬಳಸುವವರೇ ಎಚ್ಚರ : ಇದರಲ್ಲಿವೆ `ಟಾಯ್ಲೆಟ್ ಸೀಟ್’ ಗಿಂತ ಡೇಂಜರ್ ಬ್ಯಾಕ್ಟೀರಿಯಾ.!








