Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಸಂಚಾರ ದಟ್ಟಣೆ ತಪ್ಪಿಸಲು ಹಲವಾರು ರಸ್ತೆಗಳು ಬಂದ್; ಸಂಚಾರಿ ಪೊಲೀಸರ ಮಾರ್ಗಸೂಚಿ ಇಲ್ಲಿದೆ!

ದೆಹಲಿ ಬಿಜೆಪಿ ಕೇಂದ್ರ ಕಚೇರಿಗೆ ಬಾಂಬ್ ಬೆದರಿಕೆ: ಉಗ್ರರ ದಾಳಿ ಸಂಚಿನ ಬಗ್ಗೆ ಗುಪ್ತಚರ ಇಲಾಖೆ ಎಚ್ಚರಿಕೆ; ರಾಜಧಾನಿಯಲ್ಲಿ ಹೈ ಅಲರ್ಟ್!

Rain In Karnataka : ವಾಯು ಚಂಡಮಾರುತ ಹಿನ್ನೆಲೆ : ಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ‘SSLC ಫಲಿತಾಂಶ’ದಲ್ಲಿ ‘ಹಿಂದಿ’ಯನ್ನು ಪರಿಗಣಿಸದಿರಲು ತೀರ್ಮಾನ: ಸಿಎಂ ಸಿದ್ದರಾಮಯ್ಯ ಘೋಷಣೆ
KARNATAKA

BREAKING: ‘SSLC ಫಲಿತಾಂಶ’ದಲ್ಲಿ ‘ಹಿಂದಿ’ಯನ್ನು ಪರಿಗಣಿಸದಿರಲು ತೀರ್ಮಾನ: ಸಿಎಂ ಸಿದ್ದರಾಮಯ್ಯ ಘೋಷಣೆ

By kannadanewsnow09

ಮೈಸೂರು : ಈ ವರ್ಷದಿಂದಲೇ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ತೃತೀಯ ಭಾಷೆ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಜಾರಿ ಮತ್ತು ಖಾಸಗಿ ಶಾಳೆಗಳು ಈ ನಿರ್ಧಾರವನ್ನು ವಿರೋಧಿಸುತ್ತಿರುವ ಬಗ್ಗೆ ಪತ್ರಕರ್ತರಿಗೆ ಪ್ರತಿಕ್ರಿಯೆ ನೀಡಿ, ಈ ವರ್ಷದಿಂದಲೇ ತೃತೀಯ ಭಾಷೆ ಹಿಂದಿಯನ್ನು ಅಂಕಗಳಿಗೆ ಪರಿಗಣಿಸದೇ, ಎಸ್ ಎಸ್ ಎಲ್ ಸಿ ಯಲ್ಲಿ 625 ಅಂಕಗಳನ್ನು 525 ಕ್ಕೆ ನಿಗದಿಪಡಿಸಲು ತೀರ್ಮಾನಿಸಲಾಗಿದೆ . ಸರ್ಕಾರದ ಯಾವುದೇ ತೀರ್ಮಾನಕ್ಕೆ ಬೆಂಬಲ ಇಲ್ಲವೇ ವಿರೋಧವೂ ವ್ಯಕ್ತವಾಗಬಹುದು. ಹಿಂದಿ ಭಾಷೆಯನ್ನು ಕಲಿಯುವುದರಲ್ಲಿ ಸರ್ಕಾರದ ವಿರೋಧವಿಲ್ಲ , ಆದರೆ ಪರೀಕ್ಷೆಯ ಅಂಕಗಳಿಗೆ ಕಡ್ಡಾಯವಾಗಬಾರದು ಎಂದರು.

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ವಿಶ್ವಾಸ

ರಾಜ್ಯದಲ್ಲಿ ನಡೆಯಲಿರುವ ಉಪಚುನಾವಣೆಯ ಬಗ್ಗೆ ಪ್ರತಿಕ್ರಿಯಿಸಿ, ದಾವಣಗೆರೆ ಹಾಗೂ ಬಾಗಲಕೋಟೆಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸುವ ವಿಶ್ವಾಸವಿದ್ದು, ಸೋಮವಾರದಿಂದ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿ, ನಂತರ ಏಪ್ರಿಲ್ 5 ರಂದು ಕೇರಳ ರಾಜ್ಯದ ಚುನಾವಣೆಯ ಪ್ರಚಾರಕ್ಕೂ ತೆರಳುವುದಾಗಿ ತಿಳಿಸಿದರು. ಈ ಹಿಂದೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿತ್ತು. ಇದು ನಮ್ಮ ಮುಂದಿನ ಗೆಲುವಿನ ದಿಕ್ಸೂಚಿಯಾಗಿದೆ. ದಾವಣೆಗೆರೆಯಲ್ಲಿ ಯಾವುದೇ ಗೊಂದಲವಿಲ್ಲ ಎಂದರು.

ಉಪಚುನಾವಣೆಗೂ, ಸಿಎಂ ಸ್ಥಾನ ವಿಚಾರಕ್ಕೂ ಸಂಬಂಧವಿಲ್ಲ

ಈ ಉಪಚುನಾವಣೆಗಳ ಗೆಲುವು, ಸಿಎಂ ಸ್ಥಾನದಲ್ಲಿ ಎದ್ದಿರುವ ಗೊಂದಲಕ್ಕೆ ತೆರೆ ಎಳೆಯಲಿದೆಯೇ ಎಂಬುದಕ್ಕೆ ಪ್ರತಿಕ್ರಯಿಸಿ, ಸಿಎಂ ಸ್ಥಾನ ವಿಚಾರಕ್ಕೂ , ಚುನಾವಣೆಗೂ ಯಾವುದೇ ಸಂಬಂಧವಿಲ್ಲ. ಪಕ್ಷದ ಹೈಕಮಾಂಡ್ ಅನುಮತಿಸಿದರೆ, ಇನ್ನೆರೆಡು ವರ್ಷವೂ ನಾನೇ ಬಜೆಟ್ ಮಂಡಿಸುತ್ತೇನೆ. ಹೈಕಮಾಂಡ್ ಸೂಚನೆಯ ಮೇರೆಗೆ ನಾವು ನಡೆಯುತ್ತೇವೆ ಎಂದರು.

ಡ್ರಗ್ಸ್ ದಂಧೆ: ತಪ್ಪಿತಸ್ಥರ ವಿರುದ್ಧ ಕ್ರಮ

ಮೈಸೂರಿನಲ್ಲಿ ಡ್ರಗ್ಸ್ ದಂಧೆಯ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಸರ್ಕಾರ ರಾಜ್ಯದಲ್ಲಿ ಡ್ರಗ್ಸ್ ದಂಧೆಯ ವಿರುದ್ಧ ಸಮರ ಸಾರಿದೆ. ಕರ್ನಾಟಕವನ್ನು ಡ್ರಗ್ಸ್ ಮುಕ್ತಗೊಳಿಸುವುದು ನಮ್ಮ ಉದ್ದೇಶ. ಮೈಸೂರಿನಲ್ಲಿ ಡ್ರಗ್ಸ್ ಜಾಲವನ್ನು ಪತ್ತೆಹಚ್ಚಿರುವ ಬಗ್ಗೆ ತಿಳಿದುಬಂದಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಮೈಸೂರಿನಲ್ಲಿ ಟ್ರಾಫಿಕ್ ಸಿಗ್ನಲ್ ಗಳು ಹೆಚ್ಚಿ, ಜನರಿಗೆ ತೊಂದರೆ ಆಗುತ್ತಿರುವ ಬಗ್ಗೆ ದೂರುಗಳು ಬರುತ್ತಿರುವ ಬಗ್ಗೆ ಉತ್ತರಿಸಿ, ಟ್ರಾಫಿಕ್ ಸಿಗ್ನಲ್ ಗಳನ್ನು ಸುಗಮ ವಾಹನ ಸಂಚಾರಕ್ಕಾಗಿ ಅಳವಡಿಸಲಾಗಿದೆ. ಈ ಬಗ್ಗೆ ಮಾಹಿತಿ ಪಡೆದು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಉತ್ತರ ಕರ್ನಾಟಕದ ಅಭಿವೃದ್ಧಿ: ಅರವಿಂದ ಬೆಲ್ಲದಗೆ ಸಚಿವ ಎಂ.ಬಿ.ಪಾಟೀಲ ತಿರುಗೇಟು

ತರಗತಿಯಲ್ಲಿ ಮುಸ್ಲಿಂ ವಿದ್ಯಾರ್ಥಿಯನ್ನು ಟೆರರಿಸ್ಟ್ ಎಂದು ಕರೆದ ಪ್ರೊಫೆಸರ್ : ವಿಡಿಯೋ ವೈರಲ್ | WATCH VIDEO

Share. Facebook Twitter LinkedIn WhatsApp Email

Related Posts

ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಸಂಚಾರ ದಟ್ಟಣೆ ತಪ್ಪಿಸಲು ಹಲವಾರು ರಸ್ತೆಗಳು ಬಂದ್; ಸಂಚಾರಿ ಪೊಲೀಸರ ಮಾರ್ಗಸೂಚಿ ಇಲ್ಲಿದೆ!

2 Mins Read

Rain In Karnataka : ವಾಯು ಚಂಡಮಾರುತ ಹಿನ್ನೆಲೆ : ಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ!

1 Min Read

ಅಪ್ರಾಪ್ತ ವಯಸ್ಸಲ್ಲಿ ಮಾಡಿದ ಅಪರಾಧ ಕೃತ್ಯಗಳಿಗೆ, ವಯಸ್ಕನಾದಾಗ ಬಂಧಿಸಲು ಸಾಧ್ಯವಿಲ್ಲ : ಹೈಕೋರ್ಟ್ ಮಹತ್ವದ ಆದೇಶ

1 Min Read
Recent News

ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಸಂಚಾರ ದಟ್ಟಣೆ ತಪ್ಪಿಸಲು ಹಲವಾರು ರಸ್ತೆಗಳು ಬಂದ್; ಸಂಚಾರಿ ಪೊಲೀಸರ ಮಾರ್ಗಸೂಚಿ ಇಲ್ಲಿದೆ!

ದೆಹಲಿ ಬಿಜೆಪಿ ಕೇಂದ್ರ ಕಚೇರಿಗೆ ಬಾಂಬ್ ಬೆದರಿಕೆ: ಉಗ್ರರ ದಾಳಿ ಸಂಚಿನ ಬಗ್ಗೆ ಗುಪ್ತಚರ ಇಲಾಖೆ ಎಚ್ಚರಿಕೆ; ರಾಜಧಾನಿಯಲ್ಲಿ ಹೈ ಅಲರ್ಟ್!

Rain In Karnataka : ವಾಯು ಚಂಡಮಾರುತ ಹಿನ್ನೆಲೆ : ಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ!

ಅಮೆರಿಕದಲ್ಲಿ ನೆಲೆಸಿರುವ ಭಾರತೀಯರಿಗೆ ಬಾರೀ ಆಘಾತ: H-1B ವೀಸಾ ಕನಿಷ್ಠ ವೇತನ 30% ಹೆಚ್ಚಳ; ಉದ್ಯೋಗಿಗಳಲ್ಲಿ ಆತಂಕ!

State News
KARNATAKA

ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಸಂಚಾರ ದಟ್ಟಣೆ ತಪ್ಪಿಸಲು ಹಲವಾರು ರಸ್ತೆಗಳು ಬಂದ್; ಸಂಚಾರಿ ಪೊಲೀಸರ ಮಾರ್ಗಸೂಚಿ ಇಲ್ಲಿದೆ!

By kannadanewsnow89 KARNATAKA 2 Mins Read

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ನಗರದ ಹಲವು ಭಾಗಗಳಲ್ಲಿ ಸಂಚಾರ ವ್ಯತ್ಯಯ…

Rain In Karnataka : ವಾಯು ಚಂಡಮಾರುತ ಹಿನ್ನೆಲೆ : ಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ!

ಅಪ್ರಾಪ್ತ ವಯಸ್ಸಲ್ಲಿ ಮಾಡಿದ ಅಪರಾಧ ಕೃತ್ಯಗಳಿಗೆ, ವಯಸ್ಕನಾದಾಗ ಬಂಧಿಸಲು ಸಾಧ್ಯವಿಲ್ಲ : ಹೈಕೋರ್ಟ್ ಮಹತ್ವದ ಆದೇಶ

BREAKING : ಇಂದು ಸಂಜೆ ಚಿತ್ರದುರ್ಗದ ಚಳ್ಳಕೆರೆಯಲ್ಲಿ ಸಚಿವ ಡಿ ಸುಧಾಕರ್ ಅಂತ್ಯಕ್ರಿಯೆ | D.Sudhakar

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.