ತುಮಕೂರು: ಹಾಲಿನ ದರವನ್ನು ಹೆಚ್ಚಳ ಮಾಡುವ ಬಗ್ಗೆ ಶೀಘ್ರದಲ್ಲಿ ತೀರ್ಮಾನ ಮಾಡಲಾಗುವುದು ಅಂತ ಸಹಕಾರ ಸಚಿವ ಕೆ.ಎನ್ ರಾಜಣ್ಣ ಹೇಳಿದರು. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ತಿಳಿಸಿದರು.
ಇದೇ ವೇಳೆ ಅವರು ಮಾತನಾಡಿ ಹಾಲಿನ ದರವನ್ನು ಹೆಚ್ಚಳ ಮಾಡಿ ಆ ಹಣವನ್ನು ರೈತರಿಗೆ ನೀಡಲಾಗುವುದು ಅಂಥ ತಿಳಿಸದಿರು. ಇದೇ ವೇಳೆ ಅವರು ಮಾತನಾಡಿ ರೈತರಿಗಾಗಿ ಬೆಲೆ ಹೆಚ್ಚಳ ಮಾಡಿದರೆ ಅದರಲ್ಲಿ ತಪ್ಪೇನು ಇಲ್ಲ ಅಂತ ಹೇಳಿದರು. ಇನ್ನೂ ಹಾಲಿನ ದರವನ್ನು ಹೆಚ್ಚಳವನ್ನು ಮಾಡುವುದರಿಂದ ತೆರಿಗೆ ಹೆಚ್ಚಳವಾಗುವುದು ಅಂತ ಹೇಳಿದರು .
ಇನ್ನೂ ರಾಜ್ಯ ಸರ್ಕಾರವು ಹಾಲಿನ ದರವನ್ನು ಹೆಚ್ಚಳ ಮಾಡುವುದಕ್ಕೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಯವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತರ ಹೆಸರಿನಲ್ಲಿ ಗ್ರಾಹಕರಿಗೆ ತೊಂದರೆ ನೀಡುತ್ತಿದ್ದಾರೆ. ಇದು ಸರ್ಕಾರದ ನಾಟಕ ಅಂತ ಅವರು ಆಕ್ರೋಶ ವ್ಯಕ್ತಪಡಿಸಿದರು.