ಬೆಂಗಳೂರು: ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಪತ್ತೆ ಬೆನ್ನಲ್ಲೇ, ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ರಾಜ್ಯದ ಮುಜರಾಯಿ ಇಲಾಖೆಯ ದೇವಾಲಯಗಳ ಪ್ರಸಾದ ವಿವಾದಕ್ಕೆ ಕಾರಣವಾಗುವ ಮುನ್ನವೇ ಎಲ್ಲಾ ದೇವಾಲಗಳ ಪ್ರಸಾದವನ್ನು ಪರೀಕ್ಷೆ ಮಾಡುವಂತ ನಿರ್ಧಾರವನ್ನು ಕೈಗೊಂಡಿದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ಹಂಚಿಕೊಂಡಂತ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು, ರಾಜ್ಯದ ಎಲ್ಲಾ ದೇವಾಲಯಗಳ ಪ್ರಸಾದವನ್ನು ಟೆಸ್ಟ್ ಮಾಡಿಸುತ್ತೇನೆ. ನಮ್ಮ ರಾಜ್ಯದಲ್ಲಿ ಶೇ.99%ನಷ್ಟು ದೇವಾಲಯಗಳು ನಂದಿನಿ ತುಪ್ಪವನ್ನೇ ಬಳಸಿಕೊಳ್ಳುತ್ತಾ ಇದ್ದಾರೆ ಎಂದರು.
ತಿರುಪತಿ ಲಡ್ಡು ವಿವಾದದಂತೆ ನಮ್ಮಲ್ಲೂ ಆಗುವುದಕ್ಕಿಂತ ಮುಂಚೆಯೇ ಜನರಿಗೆ ಸಂಶಯ ಬೇಡ ಅಂತ ನಂದಿನಿ ತುಪ್ಪ ಬಳಕೆ ಮಾಡಬೇಕು ಎಂಬುದಾಗಿ ಆದೇಶ ಮಾಡಲಾಗಿದೆ. ಕೇಂದ್ರ ಸಚಿವರೊಬ್ಬರು ರಾಜ್ಯದ ದೇವಾಲಯಗಳ ಪ್ರಸಾದ ಪರೀಕ್ಷೆ ಮಾಡಬೇಕು ಎಂದಿದ್ದಾರೆ. ನನ್ನ ಅಭಿಪ್ರಾಯ ಅಂದ್ರೆ ದೇಶದ ಎಲ್ಲಾ ದೇವಸ್ಥಾನಗಳ ಪ್ರಸಾದ ಟೆಸ್ಟ್ ಮಾಡಲಿ ಎಂಬುದಾಗಿದೆ ಎಂದರು.
ನಮ್ಮ ರಾಜ್ಯದ ಯಾವುದೇ ದೇವಾಲಯಗಳಲ್ಲಿ ಅಂತಹ ಘಟನೆ ನಡೆದಿಲ್ಲ. ಆದರೂ ಮುಂಜಾಗ್ರತಾ ಕ್ರಮವಾಗಿ ರಾಜ್ಯದ ಎಲ್ಲಾ ದೇವಾಲಯಗಳ ಪ್ರಸಾದವನ್ನು ಟೆಸ್ಟ್ ಮಾಡಲು ನಿರ್ಧರಿಸಲಾಗಿದೆ ಎಂಬುದಾಗಿ ತಿಳಿಸಿದರು.
ಬೆಂಗಳೂರಲ್ಲಿ ರಸ್ತೆಗುಂಡಿ ಮುಚ್ಚುವ ಕಾಮಗಾರಿ ಗುಣಮಟ್ಟ ಪರಿಶೀಲನೆಗೆ ರಾತ್ರಿ ವೇಳೆ ನಗರ ಸಂಚಾರ: ಡಿಕೆಶಿ
ಬೆಂಗಳೂರಲ್ಲಿ ಹೆಚ್ಚಿದ ‘ನಿಫಾ’ ಭೀತಿ : ಓರ್ವ ವ್ಯಕ್ತಿಗೆ ಸೊಂಕಿನ ಗುಣಲಕ್ಷಣ ಪತ್ತೆ, 41 ಜನರಿಗೆ ‘ಹೋಮ್ ಕ್ವಾರಂಟೈನ್’!