ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ 7 ಮಸೂದೆಗಳನ್ನು ವಿಧಾನಮಂಡಲದ ಅಧಿವೇಶನದಲ್ಲಿ ಮಂಡಿಸಲು ತೀರ್ಮಾನ ಕೈಗೊಳ್ಳಲಾಗಿದೆ.
ಈವರೆಗೆ ಕಂದಾಯ ಇಲಾಖೆಯಡಿ ಕಾರ್ಯನಿರ್ವಹಿಸುವ 7 ಪ್ರಾಧಿಕಾರಗಳಿಗೆ ಮುಖ್ಯಮಂತ್ರಿಗಳು ಅಧ್ಯಕ್ಷರಾಗಿದ್ದರು. ಇನ್ನು ಮುಂದೆ ಕಂದಾಯ ಸಚಿವರನ್ನೇ ಅಧ್ಯಕ್ಷರನ್ನಾಗಿ ನೇಮಕ ಮಾಡಲು ತೀರ್ಮಾನಿಸಲಾಗಿದ್ದು, ಅದಕ್ಕಾಗಿ ಸಂಬಂಧಪಟ್ಟ ಮಂಡಳಿ/ಪ್ರಾಧಿಕಾರಗಳ ಅಧಿನಿಯಮ ತಿದ್ದುಪಡಿಗೆ ನಿರ್ಧರಿಸಲಾಗಿದೆ. ಹೀಗಾಗಿ ಈ 7 ಮಸೂದೆಗಳನ್ನು ವಿಧಾನಮಂಡಲದ ಮುಂದೆ ಮಂಡಿಸಲು ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
- ಕೂಡಲ ಸಂಗಮ ಅಭಿವೃದ್ಧಿ ಪ್ರಾಧಿಕಾರ(ತಿದ್ದುಪಡಿ) ಮಸೂದೆ 2025
- ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ಮಸೂದೆ 2025
- ಬಸವಕಲ್ಯಾಣ ಅಭಿವೃದ್ಧಿ ಮಂಡಳಿ (ತಿದ್ದುಪಡಿ) ಮಸೂದೆ 2025
- ಬನವಾಸಿ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ಮಸೂದೆ 2025
- ಸರ್ವಜ್ಞ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ಮಸೂದೆ 2025
- ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ಮಸೂದೆ 2025
- ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ಮಸೂದೆ 2025
ಈವರೆಗೆ ಕಂದಾಯ ಇಲಾಖೆಯಡಿ ಕಾರ್ಯನಿರ್ವಹಿಸುವ 7 ಪ್ರಾಧಿಕಾರಗಳಿಗೆ ಮುಖ್ಯಮಂತ್ರಿಗಳು ಅಧ್ಯಕ್ಷರಾಗಿದ್ದರು. ಇನ್ನು ಮುಂದೆ ಕಂದಾಯ ಸಚಿವರನ್ನೇ ಅಧ್ಯಕ್ಷರನ್ನಾಗಿ ನೇಮಕ ಮಾಡಲು ತೀರ್ಮಾನಿಸಲಾಗಿದ್ದು, ಅದಕ್ಕಾಗಿ ಸಂಬಂಧಪಟ್ಟ ಮಂಡಳಿ/ಪ್ರಾಧಿಕಾರಗಳ ಅಧಿನಿಯಮ ತಿದ್ದುಪಡಿಗೆ ನಿರ್ಧರಿಸಲಾಗಿದೆ.
ಹೀಗಾಗಿ ಈ 7 ಮಸೂದೆಗಳನ್ನು ವಿಧಾನಮಂಡಲದ ಮುಂದೆ… pic.twitter.com/o4LKh23N1N
— CM of Karnataka (@CMofKarnataka) July 24, 2025