ದಾವಣಗೆರೆ: ಚಿತ್ರದುರ್ಗ ಜಿಲ್ಲೆಯ ಸಿರಿಗೆರೆಯಲ್ಲಿನ ತರಳಬಾಳು ಗುರುಪೀಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯನ್ನು ಪೀಠದಿಂದ ಕೆಳಗೆ ಇಳಿಸಲು ಶಾಸಕ ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ನಡೆದಂತ ಸಭೆಯಲ್ಲಿ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಅಲ್ಲದೇ ಆಗಸ್ಟ್.18ರಂದು ಸಿರಿಗೆರೆ ಮಠಕ್ಕೆ ಹೋಗಲು ಸಭೆಯಲ್ಲಿ ನಿರ್ಧರಿಸಲಾಗಿದೆ.
ಇಂದು ತರಳಬಾಳು ಪೀಠ ಅಂದು-ಇಂದು-ಮುಂದು ಕುರಿತಂತೆ ಶ್ರೀಮಠದ ಸದ್ಭಕ್ತರ ಸಮಾಲೋಚನಾ ಸಭೆಯು, ಶಾಸಕ ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ಅಪೂರ್ವ ರೆಸಾರ್ಟ್ ನಲ್ಲಿ ನಡೆಯಿತು.
ಈ ಸಭೆಯಲ್ಲಿ ಶಾಸಕ ಶಾಮನೂರು ಶಿವಶಂಕರಪ್ಪ ಅವರು ನೇತೃತ್ವದಲ್ಲಿ ನಡೆದಂತ ಸಭೆಯಲ್ಲಿ ಸಿರಿಗೆರೆಯ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯ ವಿರುದ್ಧ ಸ್ವ ಜಾತಿಯಿಂದಲೇ ಆಕ್ರೋಶ ವ್ಯಕ್ತವಾಯಿತು.
ಈ ಸಭೆಯ ಬಳಿಕ ಮಾತನಾಡಿದಂತ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಹತ್ತು ವರ್ಷಗಳ ಹಿಂದೆ ಸಿರಿಗೆರೆ ಸ್ವಾಮೀಜಿ ಪದತ್ಯಾಗ ಮಾಡುವುದಾಗಿ ಘೋಷಣೆ ಮಾಡಿದ್ದರು. ಆದರೇ ಭಕ್ತರ ಆಗ್ರಹದಿಂದ ತ್ಯಾಗ ಮಾಡಲಿಲ್ಲ ಎಂದರು.
ಇಂದಿನ ಸಭೆಯಲ್ಲಿ ಸಿರಿಗೆರೆ ಮಠದ ಸ್ವಾಮೀಜಿ ಬದಲಾವಣೆಗೆ ನಿರ್ಧರಿಸಲಾಗಿದೆ. ಅದಕ್ಕಾಗಿ ಸಮಿತಿಯನ್ನು ರಚಿಸಲಾಗಿದೆ ಎಂಬುದಾಗಿ ತಿಳಿಸಿದರು.
‘ಸೆಲ್ಫಿ ಪ್ರಿಯ’ರೇ ಎಚ್ಚರ.! ನೀವು ಪ್ರಪಾತದ ಬಳಿಯಲ್ಲಿ ಸೆಲ್ಫಿ ಕ್ಲಿಕ್ಕಿಸಲು ಹೋಗೋ ಮುನ್ನಾ ಈ ಸುದ್ದಿ ಓದಿ.!